2.5 lakh posts in Karnataka Government Departmentsಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 23: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಬೆಂಗಳೂರಿನ (Bengaluru) ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಅಭಯ ಹಸ್ತ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದ ನಂತರ ನೇಮಕಾತಿಯಲ್ಲಿದ್ದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತಿದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆ ಅತಿ ಮಹತ್ವದ್ದಾಗಿದ್ದು, ಇಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.

ಈ ಎಲ್ಲ ನೇಮಕಾತಿಗಳನ್ನು ಕೌನ್ಸೆಲಿಂಗ್ ಮೂಲಕ ಮಾಡುತ್ತಿದ್ದು, ಭ್ರಷ್ಠಚಾರ ತಡೆಯಲು ಸಾಧ್ಯವಾಗುತ್ತಿದೆ. 5,700 ವೈದ್ಯರು ಸೇರಿದಂತೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಟಾಚಾರವನ್ನು ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್‌ಗಳ ಹಾವಳಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ನೌಕರರು ಇದಕ್ಕೆ ಬಲಿಯಾಗಬಾರದು ಎಂದು ಕಿವಿಮಾತು ಹೇಳಿದರು.

ಟ್ವಿಟರ್‌ ಪೋಸ್ಟ್‌

ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಇಲಾಖೆಯ ಕೆಲಸ ಕಾರ್ಯಗಳಲ್ಲಿ ಜಾತಿ, ಧರ್ಮಗಳ ಬೇಧಗಳನ್ನು ಮೀರಿ, ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ. ರೋಗಿಗಳು ಚಿಕಿತ್ಸೆಯ ಸಂದರ್ಭದಲ್ಲಿ ಬೇಕಾಗುವ ರಕ್ತವನ್ನು ಪಡೆಯಲು ಯಾವುದೇ ಜಾತಿ-ಧರ್ಮಗಳನ್ನು ಪರಿಗಣಿಸುವುದಿಲ್ಲ. ಆದರೆ ಜನರು ಗುಣಮುಖರಾದ ತಕ್ಷಣ ಮತ್ತೆ ಜಾತಿ-ಧರ್ಮಗಳ ಸುಳಿಯಲ್ಲಿ ಬೀಳುತ್ತಾರೆ. ರೋಗ ತಡೆಗಟ್ಟುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ದಿಸೆಯಲ್ಲಿ ಆರೋಗ್ಯ ಸಿಬ್ಬಂದಿಗಳು ಕಾರ್ಯತತ್ಪರರಾಗಬೇಕು. ರಾಜ್ಯದ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಸರ್ಕಾರ ಕಾರ್ಯಗತಗೊಳಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ‌ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್, ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *