Karnataka 2nd PUC Results Increase by 10%: Udupi Tops, Yadgir Ranks Lastಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (Karnataka School Examination and Assessment Board (KSEAB) 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು (2nd PUC Result) ಪ್ರಕಟಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.86ರಷ್ಟು ಮಕ್ಕಳು ಉತ್ತೀರ್ಣಗೊಂಡಿದ್ದಾರೆ.

ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು 598 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಕೊಟ್ಟೂರಿನ‌ ಇಂದೂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಾದ ಸಂಗೀತಾ ಹಾಗೂ ಅರ್ಚನಾ ಕಲಾ ವಿಭಾಗದಲ್ಲಿ ತಲಾ 598 ಅಂಕ ಪಡೆದು ಸಾಧನೆ ಮಾಡಿದ್ದಾರೆ.

ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಹೀಗಾಗಿ ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ.

2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ-1 ಫೆ.28ರಿಂದ ಆರಂಭವಾಗಿ ಮಾರ್ಚ್ 17ರವರೆಗೆ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದವು. 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿ ಕೊಂಡಿದ್ದರು. ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.

ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *