Aadhar card PAN card linking is mandatory last date march 31ಪ್ಯಾನ್‌ ಕಾರ್ಡ್‌

ನವದೆಹಲಿ, ಮಾರ್ಚ್‌ 19: ಹೊಸ ಹಣಕಾಸು ವರ್ಷ (Finical Year) ಆರಂಭವಾಗುವ ಮುನ್ನವೇ ಪ್ಯಾನ್ ಕಾರ್ಡ್‌ (Pan Card) ಬಳಕೆದಾರರಿಗೆ ಮಹತ್ವದ ಸೂಚನೆ ನೀಡಿದೆ. ಏ. 1 ರಿಂದ ಪ್ಯಾನ್ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿದೆ. ಮಾ. 31ರೊಳಗೆ ಆಧಾ‌ರ್ ಜತೆ ಪ್ಯಾನ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಈ ಗಡುವಿನೊಳಗೆ ಲಿಂಕ್ ಮಾಡದಿದ್ದರೆ, ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಸಿದೆ.

ಆಧಾರ್ ಬಳಕೆದಾರರೀಗ 134 ಕೋಟಿ

ಭಾರತದ ಮಹತ್ವಾಕಾಂಕ್ಷೆಯ ಡಿಜಿಟಲ್ ಗುರುತಿನ ಚೀಟಿ ಆಧಾ‌ರ್ ಕಾರ್ಡ್ ಹೊಂದಿರುವವರ ಸಂಖ್ಯೆ 134 ಕೋಟಿ ದಾಟಿದೆ ಎಂದು ಕೇಂದ್ರ ಸರ್ಕಾರ ಬುಧವಾರ ತಿಳಿಸಿದೆ. ಇದೇ ವೇಳೆ, ಆಧಾರ್ ದತ್ತಾಂಶಗಳ ಸುರಕ್ಷತೆಯನ್ನು ಇನ್ನಷ್ಟು ಬಲಪಡಿಸಲು ಬಹುಹಂತದ (ಮಲ್ಟಿ ಟೈಯರ್) ಭದ್ರತಾ ಚೌಕಟ್ಟನ್ನು ರೂಪಿಸಲಾಗಿದ್ದು, ಸಾರ್ವಜನಿಕರ ಖಾಸಗಿ ಮಾಹಿತಿಯ ರಕ್ಷಣೆಗೆ ಆದ್ಯತೆ ನೀಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಹೆಚ್ಚುತ್ತಿರುವ ಸೈಬರ್ ದಾಳಿಗಳ ಹಿನ್ನೆಲೆಯಲ್ಲಿ, ಆಧಾ‌ರ್ ದತ್ತಾಂಶಗಳನ್ನು ಸಂಗ್ರಹಿಸುವ ಸರ್ವ‌್ರಗಳಿಗೆ ಅಂತರರಾಷ್ಟ್ರೀಯ ಮಟ್ಟದ ಭದ್ರತೆ ಒದಗಿಸಲಾಗಿದೆ. ಅಲ್ಲದೆ, ಫೇಸ್ ಆಥೆಂಟಿಕೇಶನ್ ಮತ್ತು ಐರಿಸ್ ಸ್ಕ್ಯಾನ್ ನಂತಹ ಸುಧಾರಿತ ತಂತ್ರಜ್ಞಾನಗಳನ್ನು ಬಳಸಿ ವಂಚನೆಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *