April 25 Hail rain North Karnatakaʼs Koppal, Vijayapura, Bagalkot, Raichur and Kalaburagiಸಾಂದರ್ಭಿಕ ಚಿತ್ರ

ಬೆಂಗಳೂರು, ಏಪ್ರಿಲ್‌ 24: ಕರ್ನಾಟಕದಲ್ಲಿ ಬಿಸಿಲಿನ ಆರ್ಭಟ ಜೋರಾಗಿದೆ. ಬಿರು ಬೇಸಿಗೆ ಮಧ್ಯೆ ಮಳೆಯ ಆರ್ಭಟ ಕೂಡ ಜೋರಾಗಿದೆ. ಇದೀಗ ಹವಾಮಾನ ಇಲಾಖೆ ತಂಪನೆಯ ಸುದ್ದಿ ನೀಡಿದ್ದು, ಇಂದು ಮತ್ತು ನಾಳೆ (ಏ.25) ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯದ ಬಾಗಲಕೋಟೆ, ಕೊಪ್ಪಳ, ಕಲಬುರಗಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಆಲಿಕಲ್ಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಗಾಳಿಯ ವೇಗೆ ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸಲಿದೆ ಎಂದು ತಿಳಿಸಿದೆ.

ಬೇಸಿಗೆಯಲ್ಲಿ ಸುರಿಯುವ ಈ ಮಳೆಯಿಂದ ಮಾವು, ಗೋಡಂಬಿ ಮತ್ತು ನಿಂಬೆ ಬೆಳೆಗಾರರಿಗೆ ಹಾನಿಯಾಗುತ್ತದೆ. ಆಲಿಕಲ್ಲು ಬಡಿದು, ಹಣ್ಣು ಮತ್ತು ಹೂವು ಉದುರುತ್ತದೆ. ಇದರಿಂದ ರೈತರಿಗೆ ಅಪಾರ ನಷ್ಟ ಉಂಟಾಗುತ್ತದೆ.  

ಇನ್ನು, ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ಬಿಸಿ ಮತ್ತು ತೇವಾಂಶ ಪರಿಸ್ಥಿತಿಗಳು ಹೆಚ್ಚಾಗಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎಲ್ಲೋ ಅಲರ್ಟ್‌ ಘೋಷಿಸಿದೆ. ಮುಂದಿನ ಐದು ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ.  

ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *