Ballari DCC Bank Recruitment 2026ಬಳ್ಳಾರಿ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ಉದ್ಯೋಗ

ಬಳ್ಳಾರಿ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ (Ballari DCC Bank) ಖಾಲಿ ಇರುವ 82 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತರು ಮೇ 6ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹತೆಗಳೇನು?  

ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ದ್ವಿತೀಯ ದರ್ಜೆ ಸಹಾಯಕರ ಹುದ್ದೆಯ ಆಕಾಂಕ್ಷಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಾಹನ ಚಾಲಕರು ಮತ್ತು ಕಿರಿಯ ಸೇವಕರ ಹುದ್ದೆಗಳೂ ಖಾಲಿ ಇದ್ದು, ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ. ಚಾಲಕರ ಹುದ್ದೆಯ ಆಕಾಂಕ್ಷಿಗಳು ಚಾಲನಾ ಪರವಾನಗಿ ಹೊಂದಿರಬೇಕು. ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೂ ಕನ್ನಡ ಜ್ಞಾನ ಕಡ್ಡಾಯ.

ಅಭ್ಯರ್ಥಿಗಳು ಮಾತನಾಡಲು, ಓದಲು ಮತ್ತು ಬರೆಯಲು ತಿಳಿದಿರಬೇಕು. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ. ಇತರೆ ಹಿಂದುಳಿದ ವರ್ಗಕ್ಕೆ ಸೇರಿರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 38 ವರ್ಷ ಹಾಗೂ ಎಸ್‌ಸಿ/ಎಸ್‌ಟಿ/ ಪ್ರವರ್ಗ-1 ರ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ 40 ವರ್ಷ ವಯಸ್ಸು 38 ಮೀರಿರಬಾರದು.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 1000 ರೂ. ಹಾಗೂ ವಿಶೇಷ ಚೇತನ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಾಗಿದ್ದಲ್ಲಿ 500 ರೂ. ಶುಲ್ಕ ಪಾವತಿಸಲು ಸೂಚಿಸಲಾಗಿದೆ.

ಪ್ರಮುಖ ಸೂಚನೆ

ವ್ಯವಸ್ಥಾಪಕರು ಮತ್ತು ಪ್ರಥಮ / ದ್ವಿತೀಯ ದರ್ಜೆ ಸಹಾಯಕರು/ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಕನ್ನಡ ಭಾಷೆ, ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಜ್ಞಾನ, ಸಹಕಾರ ವಿಷಯ, ಸಂವಿಧಾನ ಮತ್ತು ಬ್ಯಾಂಕಿಂಗ್ ಸಂಬಂಧಿತ ಪ್ರಶ್ನೆಗಳಿರುತ್ತವೆ.

ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಆಧಾರದ ಮೇಲೆ ಅರ್ಹತಾ ಪಟ್ಟಿ ತಯಾರಿಸಿ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನಕ್ಕೆ 15 ಅಂಕಗಳಿರುತ್ತವೆ.

ಚಾಲಕರು ಮತ್ತು ಕಿರಿಯ ಸೇವಕರ ಹುದ್ದೆಗಳಿಗೆ ನಡೆಯುವ ಪರೀಕ್ಷೆಯಲ್ಲಿ ಕನ್ನಡ ಭಾಷೆ ಮತ್ತು ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಗಳಷ್ಟೇ ಇರುತ್ತವೆ.

ಸಹಾಯವಾಣಿ: 988042742

ವಿವರಗಳಿಗೆ: https://bellarydcc.bank.in

ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *