Complaint filed against Hardik Pandya for insulting the national flagಹಾರ್ದಿಕ್‌ ಪಾಂಡ್ಯ

ನವದೆಹಲಿ, ಮಾರ್ಚ್‌ 12: ಅಹಮದಾಬಾದ್‌ನ ಕೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ ವಿಜಯೋತ್ಸವದ ಸಂದರ್ಭದಲ್ಲಿ ರಾಷ್ಟ್ರೀಯ ಧ್ವಜಕ್ಕೆ ಅವಮಾನ (Insulting national Flag) ಮಾಡಿದ ಆರೋಪದ ಮೇಲೆ ಕ್ರಿಕೆಟ್‌ಗ ಹಾರ್ದಿಕ್‌ ಪಾಂಡ್ಯ (Hardik Pandya) ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಕೋರಿ ವಕೀಲರೊಬ್ಬರು ಪುಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಶಿವಾಜಿ ನಗರ ಪೊಲೀಸ್‌ ಠಾಣಾಧಿಕಾರಿ ಬುಧವಾರ ದೂರು ಅರ್ಜಿ ವಕೀಲ ಖಾನ್‌ ಸಲ್ಲಿಸಿದ್ದಾರೆ ಎಂದು ಧೃಡಪಡಿಸಿದ್ದಾರೆ.

ಭಾನುವಾರ ನಡೆದಿದ್ದ ನ್ಯೂಜಿಲೆಂಡ್‌ ವಿರುದ್ಧದ ಫೈನಲ್‌ನಲ್ಲಿ ಭಾರತದ ಗೆಲುವನ್ನು ಆಚರಿಸುವಾಗ ಪಾಂಡ್ಯ ತಮ್ಮ ದೇಹದ ಸುತ್ತಲೂ ತ್ರಿವರ್ಣ ಧ್ವಜವನ್ನು ಸುತ್ತಿಕೊಂಡು ನೆಲದ ಮೇಲೆ ಅಶ್ಲೀಲ ವರ್ತನೆ ತೋರಿದ್ದಾನೆ ಎಂದು ಖಾನ್‌ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: IPL 2026ರ ಪಂದ್ಯಗಳ ವೇಳಾಪಟ್ಟಿ ಪ್ರಕಟ, ಮೊದಲ ಪಂದ್ಯ RCB vs SRH

ಈ ಕೃತ್ಯವು ಸಂಬಂಧಿತ ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ ಮತ್ತು ಕಾನೂನು ಕ್ರಮ ಕೈಗೊಳ್ಳಬೇಕು. ರಾಷ್ಟ್ರ ಧ್ವಜದ ಘನತೆಯನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ದೂರಿನ ಅರ್ಜಿಯಲ್ಲಿ ತಿಳಿಸಲಾಗಿದೆ.

ವಿಶ್ವಕಪ್‌ ಗೆಲುವಿನ ಬಳಿಕ ಹಾರ್ದಿಕ್‌ ಪಾಂಡ್ಯ ತಮ್ಮ ಗೆಳತಿ ಮಹಿಕಾ ಶರ್ಮಾ ಜತೆ ಕಿಸ್ಸಿಂಗ್‌ ಮಾಡುವುದು ಕಂಡುಬಂದಿತ್ತು. ಈ ವೇಳೆ ಅವರು ತ್ರಿವರ್ಣ ಧ್ವಜವನ್ನು ಸುತ್ತಿಕೊಂಡಿದ್ದರು. ಪಾಂಡ್ಯ ವರ್ತನೆಗೆ ಅದಾಗಲೇ ನೆಟ್ಟಿಗರು ಆಕ್ರೋಶ ಹೊರಹಾಕಿದರು. ಇದೀಗ ಪಾಂಡ್ಯಗೆ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.   

ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *