ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ದೇಶದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಪಕ್ಕಾ ಮನೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಮುಖ ಸಾಮಾಜಿಕ ಕಲ್ಯಾಣ ಯೋಜನೆಯಾಗಿದೆ. 2015ರಲ್ಲಿ ಆರಂಭವಾದ ಈ ಯೋಜನೆಯ ಮುಖ್ಯ ಗುರಿ ಎಲ್ಲರಿಗೂ ವಸತಿ ಕಲ್ಪಿಸುವುದಾಗಿದೆ. ಈ ಯೋಜನೆಯು ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ (PMAY-U) ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ (PMAY-G) ಎಂಬ ಎರಡು ವಿಭಾಗಗಳನ್ನು ಒಳಗೊಂಡಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ಕೊರತೆಯನ್ನು ನೀಗಿಸಿ, ಅರ್ಹ ಕುಟುಂಬಗಳಿಗೆ ಮೂಲಭೂತ ಸೌಲಭ್ಯಗಳಿರುವ ಪಕ್ಕಾ ಮನೆಗಳನ್ನು ಒದಗಿಸುವುದು ಇದರ ಉದ್ದೇಶವಾಗಿದೆ. ಭಾರತದಲ್ಲಿ ಬಡವರಿಗೆ ವಸತಿ ಒದಗಿಸುವ ಪ್ರಯತ್ನಗಳು ಹಲವು ದಶಕಗಳಿಂದ ನಡೆಯುತ್ತಿವೆ. 1985ರಲ್ಲಿ ಆರಂಭವಾದ ಇಂದಿರಾ ಆವಾಸ್ ಯೋಜನೆ ಗ್ರಾಮೀಣ ಬಡವರಿಗೆ ಮನೆ ನಿರ್ಮಿಸಲು ನೆರವಾಗಿತ್ತು. ಬಳಿಕ ಈ ಯೋಜನೆಯನ್ನು ವಿಸ್ತರಿಸಿ 2015ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ರೂಪದಲ್ಲಿ ಜಾರಿಗೆ ತರಲಾಯಿತು. ಯೋಜನೆಯ ಪ್ರಮುಖ ಉದ್ದೇಶ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪಕ್ಕಾ ಮನೆ ಇಲ್ಲದ ಕುಟುಂಬಗಳಿಗೆ ಮನೆ ನಿರ್ಮಿಸಲು ಆರ್ಥಿಕ ನೆರವು ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಯೋಜನೆಯಡಿ ನಿರ್ಮಿಸಲಾಗುವ ಮನೆಗಳಲ್ಲಿ ವಿದ್ಯುತ್, ಕುಡಿಯುವ ನೀರು, ಅಡುಗೆಮನೆ ಹಾಗೂ ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ. ಮಹಿಳಾ ಸಬಲೀಕರಣಕ್ಕೆ ಆದ್ಯತೆ ಯೋಜನೆಯಡಿ ಮನೆ ಅಥವಾ ಭೂಮಿಯನ್ನು ಮಹಿಳೆಯ ಹೆಸರಿನಲ್ಲಿ ಅಥವಾ ಪತಿ-ಪತ್ನಿಯರ ಜಂಟಿ ಹೆಸರಿನಲ್ಲಿ ನೋಂದಾಯಿಸಲು ಆದ್ಯತೆ ನೀಡಲಾಗಿದೆ. ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಹಿರಿಯ ನಾಗರಿಕರು ಹಾಗೂ ವಿಶೇಷಚೇತನರಿಗೆ ವಿಶೇಷ ಆದ್ಯತೆ ಕಲ್ಪಿಸಲಾಗಿದೆ. PMAY-ಗ್ರಾಮೀಣ ಯೋಜನೆಯ ವಿಶೇಷತೆ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಇಲ್ಲದ ಅಥವಾ ಕಚ್ಚಾ ಮನೆಗಳಲ್ಲಿ ವಾಸಿಸುವ ಕುಟುಂಬಗಳಿಗೆ ಪಕ್ಕಾ ಮನೆ ನಿರ್ಮಿಸಲು ಸಹಾಯಧನ ನೀಡಲಾಗುತ್ತದೆ. ಮನೆಗಳ ಜೊತೆಗೆ ವಿದ್ಯುತ್, ಕುಡಿಯುವ ನೀರು, ಶೌಚಾಲಯ ಮತ್ತು ಸ್ವಚ್ಛ ಅಡುಗೆ ಇಂಧನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲು ಇತರೆ ಸರ್ಕಾರಿ ಯೋಜನೆಗಳೊಂದಿಗೆ ಸಮನ್ವಯ ಸಾಧಿಸಲಾಗಿದೆ. ಯೋಜನೆಯ ಪ್ರಮುಖ ಪ್ರಯೋಜನಗಳು ಸ್ವಂತ ಪಕ್ಕಾ ಮನೆ ಪಡೆಯುವ ಅವಕಾಶ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು ಭೂರಹಿತರಿಗೆ ಭೂಮಿ ಒದಗಿಸುವ ಸೌಲಭ್ಯ ಮಹಿಳೆಯರ ಹೆಸರಿನಲ್ಲಿ ಮನೆ ನೋಂದಣಿ ವಸತಿ ಸಾಲಗಳ ಮೇಲೆ ಬಡ್ಡಿ ಸಬ್ಸಿಡಿ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಸುಧಾರಣೆ ನಗರ ಪ್ರದೇಶಗಳಲ್ಲಿ ಕೊಳೆಗೇರಿ ನಿವಾರಣೆ ಸಹಾಯಧನವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡುವ ವ್ಯವಸ್ಥೆ ಅರ್ಹತಾ ಮಾನದಂಡಗಳು ಯೋಜನೆಯ ಲಾಭ ಪಡೆಯಲು ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಭಾರತದಲ್ಲಿ ಎಲ್ಲಿಯೂ ಪಕ್ಕಾ ಮನೆ ಹೊಂದಿರಬಾರದು. ವಾರ್ಷಿಕ ಆದಾಯದ ಆಧಾರದ ಮೇಲೆ ಆರ್ಥಿಕವಾಗಿ ದುರ್ಬಲ ವರ್ಗ (EWS), ಕಡಿಮೆ ಆದಾಯದ ಗುಂಪು (LIG) ಮತ್ತು ಮಧ್ಯಮ ಆದಾಯದ ಗುಂಪುಗಳಿಗೆ ಯೋಜನೆ ಅನ್ವಯಿಸುತ್ತದೆ. ಅಗತ್ಯ ದಾಖಲೆಗಳು ಆಧಾರ್ ಕಾರ್ಡ್ ಆದಾಯ ಪ್ರಮಾಣಪತ್ರ ಬ್ಯಾಂಕ್ ಖಾತೆ ವಿವರ ನಿವಾಸದ ಪುರಾವೆ ಜಾತಿ ಪ್ರಮಾಣಪತ್ರ (ಅನ್ವಯಿಸಿದರೆ) ಭೂಮಿ ಅಥವಾ ಆಸ್ತಿ ದಾಖಲೆಗಳು (ಅನ್ವಯಿಸಿದರೆ) ಅರ್ಜಿ ಸಲ್ಲಿಸುವುದು ಹೇಗೆ? ಅರ್ಹರು ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ (CSC), ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆ ಅಥವಾ ಯೋಜನೆಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಆಧಾರ್ ಸಂಖ್ಯೆ ಮತ್ತು ಅಗತ್ಯ ದಾಖಲೆಗಳ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation ರೈತರ ಕೃಷಿ ವೆಚ್ಚ ಕಡಿಮೆ ಮಾಡಲು ಕೇಂದ್ರದಿಂದ ಹೊಲ ಉಳಿಸಿ ಅಭಿಯಾನ ಡಿಸೆಂಬರ್ 2026ರ ವೇಳೆಗೆ 75 ಲಕ್ಷ ಮನೆಗಳಿಗೆ ಮೇಲ್ಛಾವಣಿ ಸೌರಶಕ್ತಿ ಅಳವಡಿಕೆ ಗುರಿ: ಜೋಶಿ