ಬೆಂಗಳೂರು, ಏಪ್ರಿಲ್ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2026ರ ದ್ವಿತೀಯ ಪಿಯುಸಿ ಫಲಿತಾಂಶವನ್ನು (Karnataka 2nd PUC Result 2026) ಗುರುವಾರ (ಏ. 9) ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಿದೆ. ವಿದ್ಯಾರ್ಥಿಗಳು ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ ಆನ್‌ಲೈನ್ ಮೂಲಕ ಪಡೆದುಕೊಳ್ಳಿ. ಕೆಲವೊಮ್ಮೆ ಫಲಿತಾಂಶ ಪ್ರಕಟವಾದ ತಕ್ಷಣ ಡಿಜಿಲಾಕರ್‌ನಲ್ಲಿ ಫಲಿತಾಂಶದ ಆಯ್ಕೆಯು ಕಾಣಿಸದಿರಬಹುದು. ಆತಂಕಪಡಬೇಕಾದ ಅಗತ್ಯವಿಲ್ಲ, ಏಕೆಂದರೆ ಕೆಲವು ಸರಳ ಹಂತಗಳನ್ನು ಅನುಸರಿಸುವ ಮೂಲಕ ಅಂಕಪಟ್ಟಿಯನ್ನು ಪಡೆಯಬಹುದು. ಫಲಿತಾಂಶವನ್ನು ಡಿಜಿಲಾಕರ್‌ನಲ್ಲಿ ಪಡೆಯುವುದು ಹೇಗೆ? ಮೊದಲಿಗೆ ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಸ್ಟೋರ್‌ನಿಂದ digilocker ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ. ಅಪ್ಲಿಕೇಶನ್ ಇಲ್ಲದಿದ್ದರೆ ನೇರವಾಗಿ digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ. ಅಪ್ಲಿಕೇಶನ್ ತೆರೆದ ನಂತರ ಮುಖಪುಟದಲ್ಲಿ ಕಾಣುವ ಡಾಕ್ಯುಮೆಂಟ್ ವರ್ಗಗಳ ಅಡಿಯಲ್ಲಿ ಶಿಕ್ಷಣ ಮತ್ತು ಕಲಿಕೆ ಎಂಬ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ಪಿಯುಸಿ ನೋಂದಣಿ ಸಂಖ್ಯೆ (Roll Number/Registration Number) ಮತ್ತು ಪರೀಕ್ಷೆ ಬರೆದ ವರ್ಷವನ್ನು ನಮೂದಿಸಿ. ಫಲಿತಾಂಶ ಪರದೆಯ ಮೇಲೆ ಮೂಡುತ್ತದೆ. ಇದರಲ್ಲಿ ನಿಮ್ಮ ವಿಷಯವಾರು ಅಂಕಗಳು ಲಭ್ಯವಿರುತ್ತವೆ. ಅಲ್ಲಿರುವ ಡೌನ್‌ಲೋಡ್ ಬಟನ್ ಕ್ಲಿಕ್ ಮಾಡಿ, ಪಿಡಿಎಫ್ ರೂಪದಲ್ಲಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಡಿಜಿಲಾಕರ್ ಭಾರತ ಸರ್ಕಾರದ ಡಿಜಿಟಲ್ ಸೇವೆಯಾಗಿದ್ದು, ನಾಗರಿಕರು ತಮ್ಮ ಪ್ರಮುಖ ದಾಖಲೆಗಳನ್ನು ಸುರಕ್ಷಿತವಾಗಿ ಆನ್‌ಲೈನ್‌ನಲ್ಲಿ ಸಂಗ್ರಹಿಸಲು ಇದು ಸಹಾಯ ಮಾಡುತ್ತದೆ. ಇದಲ್ಲದೆ, ಅಂಕಪಟ್ಟಿ, ಆಧಾರ್ ಕಾರ್ಡ್, ಚಾಲನಾ ಪರವಾನಗಿ (ಡ್ರೈವಿಂಗ್ ಲೈಸೆನ್ಸ್) ಮುಂತಾದ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಪಡೆಯಬಹುದು. ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation Karnataka 2nd PUC Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ! 2nd PUC Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ರಾಜ್ಯಕ್ಕೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಪ್ರಥಮ!