Hubballi's Jayadeva Heart Hospital ready for Juneಜಯದೇವ ಆಸ್ಪತ್ರೆ

ಹುಬ್ಬಳ್ಳಿ, ಮಾರ್ಚ್‌ 19: ಹುಬ್ಬಳ್ಳಿಯಲ್ಲಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (Hubballi Jayadeva Cardiology Hospital) ಕಟ್ಟಡ ನಿರ್ಮಾಣ ಕಾರ್ಯ ವೇಗ ಪಡೆದಿದ್ದು, ಏಪ್ರಿಲ್ ವೇಳೆಗೆ ಪೂರ್ಣಗೊಳ್ಳಲಿದೆ. ಕಾಮಗಾರಿಗಳು ಹಾಗೂ ವೈದ್ಯಕೀಯ ಸಾಧನಗಳ ಅಳವಡಿಕೆ ಜೂನ್ ವೇಳೆಗೆ ಮುಗಿಯುವ ನಿರೀಕ್ಷೆಯಿದೆ.

ಈ ಯೋಜನೆಯ ಕೆಲಸ ಮಾರ್ಚ್ 2023ರಲ್ಲಿ ಆರಂಭವಾಗಿತ್ತು. ಕಾರ್ಮಿಕರ ಕೊರತೆ ಹಿನ್ನೆಲೆಯಲ್ಲಿ ಕಟ್ಟಡ ಕಾಮಗಾರಿಗೆ ಅಡ್ಡಿಯಾಯಿತು. ಆಸ್ಪತ್ರೆಯ ಸಂಪರ್ಕ ರಸ್ತೆಯ ನಿರ್ಮಾಣ ಕಾರ್ಯ ಇನ್ನೂ ನಡೆಯುತ್ತಿದೆ.

430 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯು ಸುಮಾರು ರೂ. 250 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಉತ್ತರ ಕರ್ನಾಟಕದ 13 ಜಿಲ್ಲೆಗಳ ಹೃದಯ ರೋಗಿಗಳಿಗೆ ನೆರವಾಗಲಿದೆ.

ಉತ್ತರ ಕರ್ನಾಟಕದ ಭಾಗದ ಹೃದಯ ರೋಗಿಗಳು ಪರೀಕ್ಷೆ ಮತ್ತು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತೆರಳಬೇಕಾಗುತ್ತಿತ್ತು. ಹಲವು ವರ್ಷಗಳಿಂದ ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆ ಆರಂಭಿಸುವಂತೆ ಬೇಡಿಕೆ ಇತ್ತು. ರೋಗಿಗಳ ಬೇಡಿಕೆ ಕೊನೆಗೂ ಈಡೇರಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ ಕೆ ಮಾತನಾಡಿ, ಕಟ್ಟಡ ಕಾಮಗಾರಿಗಳು ಏಪ್ರಿಲ್ ವೇಳೆಗೆ ಪೂರ್ಣಗೊಳ್ಳಲಿವೆ ಎಂದು ಖಾಸಗಿ ಸುದ್ದಿ ಸಂಸ್ಥೆ ಟೈಮ್ಸ್‌ ಆಫ್‌ ಇಂಡಿಯಾಗೆ ತಿಳಿಸಿದ್ದಾರೆ.

ಈ ಕಟ್ಟಡವನ್ನು ಒಳಾಂಗಣ ಸೇರಿದಂತೆ ಇತರೆ ಕೆಲಸಗಳಿಗಾಗಿ ಜಯದೇವ ಸಂಸ್ಥೆಗೆ ಹಸ್ತಾಂತರಿಸಲಾಗುತ್ತದೆ. ಇತ್ತೀಚೆಗೆ ಜಯದೇವ ಅಧಿಕಾರಿಗಳು ಭೇಟಿ ನೀಡಿ ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *