IPL 2026: Namma Metro service extended till 2 amನಮ್ಮ ಮೆಟ್ರೋ

ಬೆಂಗಳೂರು, ಮಾರ್ಚ್‌ 26: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ಮಾರ್ಚ್‌ 28 ರಂದು ಟಾಟಾ ಐಪಿಎಲ್-2026ನ (TATA IPL 2026) ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಪ್ರಯುಕ್ತ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಪ್ರಯಾಣಿಕರಿಗೆ ಸುಲಭ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ರೈಲು (Namma Metro) ಸೇವಾ ಅವಧಿಯನ್ನು ವಿಸ್ತರಿಸಿದೆ.

ಪಂದ್ಯದ ದಿನದಂದು, ಎಲ್ಲಾ, ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11:00 ಗಂಟೆಯಿಂದ ತಡರಾತ್ರಿ 2:00 ಗಂಟೆಯವರೆಗೆ ವಿಸ್ತರಿಸಲಾಗಿದೆ.

ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲು ಹೊರಡುವ ಸಮಯ

  1. ವೈಟ್‌ಫೀಲ್ಡ್ (ಕಾಡುಗೋಡಿ) ಯಿಂದ ರಾತ್ರಿ 12.30ಕ್ಕೆ ಹೊರಡಲಿದೆ.
  2. ಚಲ್ಲಘಟ್ಟದಿಂದ ರಾತ್ರಿ 12:45ಕ್ಕೆ ಹೊರಡಲಿದೆ.
  3. ರೇಷ್ಮೆ ಸಂಸ್ಥೆ ಹಾಗೂ ಮಾದಾವರ ದಿಂದ ರಾತ್ರಿ 12.45ಕ್ಕೆ ಹೊರಡಲಿದೆ.
  4. ಬೊಮ್ಮಸಂದ್ರ ದಿಂದ ರಾತ್ರಿ 01.00ಕ್ಕೆ ಹೊರಡಲಿದೆ.
  5. ಆರ್.ವಿ ರಸ್ತೆ ಯಿಂದ ಮಧ್ಯರಾತ್ರಿ 02.00 ಹೊರಡಲಿದೆ
  6. ನಾಡಪ್ರಭು ಕೆಂಪೇಗೌಡ ನಿಲ್ಯಾಣ-ಮಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 1:30ಕ್ಕೆ ಕೊನೆಯ ರೈಲು ಹೊರಡಲಿದೆ.

ಪಂದ್ಯದ ಟಿಕೆಟ್‌ನಲ್ಲೇ ಮೆಟ್ರೋ ಕ್ಯೂಆರ್ ಕೋಡ್

ಮೆಟ್ರೋ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸಲು ಐಪಿಎಲ್ ಪಂದ್ಯದ ಟಿಕೆಟ್‌ಗಳಲ್ಲಿ ನಮ್ಮ ಮೆಟ್ರೋ ಕ್ಯೂಆರ್ ಕೋಡ್ ಎರಡು ಪ್ರಯಾಣಕ್ಕೆ (ಟು-ವೇ ಟ್ರಾವೆಲ್, ಐಪಿಎಲ್ ಟಿಕೆಟ್ ಮೇಲೆಯ ಮುದ್ರಿತವಾಗಿರುತ್ತದೆ ಅಥವಾ ಡಿಜಿಟಲ್ ಐಪಿಎಲ್ ಟಿಕೆಟ್‌ಗಳೊಂದಿಗೆ ಲಭ್ಯವಿರುತ್ತದೆ.

ಕಬ್ಬನ್ ರಸ್ತೆ ಭಾಗದಿಂದ ಸ್ಟೇಡಿಯಂಗೆ ಪ್ರವೇಶ /ನಿರ್ಗಮನ ಗೇಟ್‌ಗಳನ್ನು ಬಳಸುವ ಪ್ರೇಕ್ಷಕರು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ಬಳಸುವಂತೆ ಹಾಗೂ ಲಿಂಕ್ ರಸ್ತೆ ಭಾಗದಿಂದ ಪ್ರವೇಶ /ನಿರ್ಗಮನ ಗೇಟ್‌ಗಳನ್ನು ಬಳಸುವ ಪ್ರೇಕ್ಷಕರು ಸಮೀಪದಲ್ಲಿರುವ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣವನ್ನು ಬಳಸುವಂತೆ ಸೂಚಿಸಲಾಗಿದೆ.

ಪಂದ್ಯದ ದಿನದಂದು ಪ್ರೇಕ್ಷಕರಿಗೆ ಅನುಕೂಲವಾಗಲು ಮತ್ತು ನಮ್ಮ ಮೆಟ್ರೋದಲ್ಲಿ ಸುಗಮ ಪ್ರಯಾಣವನ್ನು ಖಚಿತಪಡಿಸಲು, ಬಿಎಂಆರ್‌ಸಿಎಲ್ ಅನೇಕ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿದೆ.

ಪಂದ್ಯದ ದಿನಗಳಲ್ಲಿ ಮೆಟ್ರೋ ನಿಲ್ದಾಣಗಳ ಪಾರ್ಕಿಂಗ್ ಸೌಲಭ್ಯವನ್ನು ಎರಡು ಚಕ್ರ ವಾಹನಗಳಿಗೆ 30 ರೂ. ಮತ್ತು ಕಾರುಗಳಿಗೆ 60 ರೂ. ನಿಗದಿತ ದರದಲ್ಲಿ ಒದಗಿಸಲಾಗುತ್ತದೆ. ಈ ದರವು ಆ ದಿನದ ಮೆಟ್ರೋ ಸೇವೆ ಮುಕ್ತಾಯವಾಗುವವರೆಗೆ ಮಾನ್ಯವಾಗಿರುತ್ತದೆ.  

ಪ್ರೇಕ್ಷಕರು ತಮ್ಮ ವಾಹನಗಳನ್ನು ನಿಗದಿತ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿ, ಮೆಟ್ರೋ ಮೂಲಕ ಸ್ನೇಡಿಯಂಗೆ ನಡೆದು ಹೋಗಬಹುದಾದ ಅಂತರದಲ್ಲಿರುವ ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳಿಗೆ ಪ್ರಯಾಣಿಸಬಹದು.    

ಪಾರ್ಕಿಂಗ್‌ಗೆ ಸ್ಥಳಾವಕಾಶ

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *