ಟಾಟಾ ಐಪಿಎಲ್ 2026ರ (TATA IPL 2026) ಆವೃತ್ತಿ ಇಂದಿನಿಂದ ಆರಂಭವಾಗಲಿದೆ. ಬೆಂಗಳೂರಿನಲ್ಲಿರುವ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Bangalore M Chinnaswamy Stadium) ಉದ್ಘಾಟನಾ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ (SRH) ನಡುವೆ ಪಂದ್ಯ ನಡೆಯಲಿದೆ. ಪಂದ್ಯವು ರಾತ್ರಿ 7 ಗಂಟೆಗೆ ಆರಂಭವಾಗಲಿದೆ. ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಆಟಗಾರರು ಕಪ್ಪು ಪಟ್ಟಿ ಕಟ್ಟಿಕೊಂಡು ಆಡಲಿದ್ದಾರೆ. ಏಕೆಂದರೆ, ಕಳೆದ ವರ್ಷ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಅಭಿಮಾನಿಗಳಿಗೆ ಗೌರವ ಸಲ್ಲಿಸಲು ಆರ್‌ಸಿಬಿ ಆಟಗಾರರು ಕಪ್ಪು ಪಟ್ಟಿ ಕಟ್ಟಿಕೊಂಡು ಆಡಲಿದ್ದಾರೆ. ಈ ಕಾರಣಕ್ಕಾಗಿಯೇ ಈ ಬಾರಿ ಯಾವುದೇ ಅದ್ಧೂರಿ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿಲ್ಲ. RCB & SRH 26 ಬಾರಿ ಮುಖಾಮುಖಿ ಐಪಿಎಲ್ ಇತಿಹಾಸದಲ್ಲಿ ಆರ್‌ಸಿಬಿ ಮತ್ತು ಎಸ್‌ಆರ್‌ಹೆಚ್ 26 ಬಾರಿ ಮುಖಾಮುಖಿಯಾಗಿವೆ. 26ರಲ್ಲಿ ಎಸ್‌ಆರ್‌ಹೆಚ್ 14 ಬಾರಿ ಮತ್ತು ಆರ್‌ಸಿಬಿ 11 ಬಾರಿ ಜಯ ಸಾಧಿಸಿದೆ. ಒಂದು ಪಂದ್ಯದ ಫಲಿತಾಂಶ ಬಂದಿಲ್ಲ. ತಂಡಗಳ ಇಂದಿನ ಬಲ ಮತ್ತು ಸವಾಲುಗಳು ಆರ್‌ಸಿಬಿ ತಂಡದ ಬ್ಯಾಟಿಂಗ್ ಲೈನಪ್ ಬಲಿಷ್ಠವಾಗಿದೆ. ಆದರೆ ಸ್ಟಾರ್ ಬೌಲರ್ ಜೋಶ್ ಹ್ಯಾಜಲ್‌ವುಡ್ ಗಾಯದ ಕಾರಣ ಮತ್ತು ಯಶ್ ದಯಾಳ್ ಅಲಭ್ಯತೆಯಿಂದ ಬೌಲಿಂಗ್ ವಿಭಾಗ ಸ್ವಲ್ಪ ಒತ್ತಡದಲ್ಲಿದೆ. ಎಸ್‌ಆರ್‌ಹೆಚ್ ನಾಯಕ ಪ್ಯಾಟ್ ಕಮ್ಮಿನ್ಸ್ ಅಲಭ್ಯರಾಗಿರುವುದರಿಂದ ಇಶಾನ್ ಕಿಶನ್ ಇಂದು ತಂಡವನ್ನು ಮುನ್ನಡೆಸುತ್ತಿದ್ದಾರೆ. ಲಿಯಾಮ್ ಲಿವಿಂಗ್‌ಸ್ಟೋನ್ ಸೇರ್ಪಡೆಯಿಂದ ಇವರ ಬ್ಯಾಟಿಂಗ್ ಮತ್ತಷ್ಟು ಶಕ್ತಿಶಾಲಿಯಾಗಿದೆ. ಹವಾಮಾನ ವರದಿ ಬೆಂಗಳೂರಿನಲ್ಲಿ ಇಂದು ಸಂಜೆ ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ. ತಾಪಮಾನವು ಸುಮಾರು 22°C ನಿಂದ 33°C ವರೆಗೆ ಇರಲಿದ್ದು, ಪಂದ್ಯಕ್ಕೆ ಯಾವುದೇ ಅಡ್ಡಿಯಾಗುವ ಲಕ್ಷಣಗಳಿಲ್ಲ. ಸಂಭಾವ್ಯ ಆಟಗಾರರ ಪಟ್ಟಿ ಆರ್‌ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್ (WK), ರಜತ್ ಪಾಟಿದಾರ್ (C), ಜಿತೇಶ್ ಶರ್ಮಾ, ಟಿಮ್ ಡೇವಿಡ್, ಜೇಕಬ್ ಬೆಥೆಲ್, ವೈಶಾಖ್ ವಿಜಯ್ ಕುಮಾರ್, ರಶೀಖ್ ದಾರ್, ಮಂಗೇಶ್ ಯಾದವ್. ಎಸ್‌ಆರ್‌ಹೆಚ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (C), ಹೆನ್ರಿಚ್ ಕ್ಲಾಸೆನ್ (WK), ನಿತೀಶ್ ಕುಮಾರ್ ರೆಡ್ಡಿ, ಲಿಯಾಮ್ ಲಿವಿಂಗ್‌ಸ್ಟೋನ್, ಭುವನೇಶ್ವರ್ ಕುಮಾರ್, ಟಿ. ನಟರಾಜನ್. ಪಿಚ್ ವರದಿ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬ್ಯಾಟರ್ಸ್‌ಗಳಿಗೆ ಸ್ವರ್ಗವಾಗಿದೆ. ಇಲ್ಲಿನ ಸರಾಸರಿ ಮೊದಲ ಇನ್ನಿಂಗ್ಸ್ ಮೊತ್ತ 180-190 ರನ್ ಆಗಿದೆ. ಮೈದಾನದ ಬೌಂಡರಿಗಳು ಚಿಕ್ಕದಾಗಿರುವುದರಿಂದ ಇಲ್ಲಿ ಸಿಕ್ಸರ್‌ಗಳ ಮಳೆ ನಿರೀಕ್ಷಿಸಬಹುದು. ಇಬ್ಬನಿ ಪಂದ್ಯದ ದ್ವಿತೀಯಾರ್ಧದಲ್ಲಿ ಇಬ್ಬನಿ ಬೀಳುವ ಸಾಧ್ಯತೆ ಹೆಚ್ಚಿರುವುದರಿಂದ, ಟಾಸ್ ಗೆದ್ದ ತಂಡವು ಮೊದಲು ಬೌಲಿಂಗ್ ಆಯ್ದುಕೊಳ್ಳುವುದು ಉತ್ತಮ. ಏಕೆಂದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಚೇಸಿಂಗ್ ಮಾಡುವುದು ಇಲ್ಲಿ ಸುಲಭ. ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation IPL 2026: RCB ಜೊತೆ KMF ನಂದಿನಿ ಡೈರಿ ಪಾಲುದಾರ RCB vs SRH: ತವರು ನೆಲದಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿಗೆ ಗೆಲವು