ನವದೆಹಲಿ, ಮೇ 11: ಸೈಬರ್ ಭದ್ರತಾ ಕ್ಷೇತ್ರದಲ್ಲಿ ವೃತ್ತಿ ನಿರ್ಮಿಸಿಕೊಳ್ಳಲು ಬಯಸುವ ತಾಂತ್ರಿಕ ವೃತ್ತಿಪರರಿಗೆ ಕೇಂದ್ರ ಸರ್ಕಾರದಿಂದ (Central Government) ಮಹತ್ವದ ಅವಕಾಶ ದೊರೆತಿದೆ. ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ದೇಶದ ಡಿಜಿಟಲ್ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 195 ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.. ಎಷ್ಟು ಹುದ್ದೆ? ಒಟ್ಟು 195 ತಾಂತ್ರಿಕ ವೃತ್ತಿಪರರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಯಾವ ರೀತಿಯ ನೇಮಕಾತಿ? ಆಯ್ಕೆಯಾದ ಅಭ್ಯರ್ಥಿಗಳನ್ನು 3 ವರ್ಷಗಳ ಅವಧಿಗೆ ಒಪ್ಪಂದ ಆಧಾರದಲ್ಲಿ ನೇಮಕ ಮಾಡಲಾಗುತ್ತದೆ. ಉದ್ಯೋಗ ಸ್ಥಳ ಎಲ್ಲಿ? ಆಯ್ಕೆಯಾದ ಅಭ್ಯರ್ಥಿಗಳು ನವದೆಹಲಿ ಹಾಗೂ ಅಸ್ಸಾಂನಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು jobs.f1infotech.in ಪೋರ್ಟಲ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ, ದಾಖಲೆಗಳನ್ನು ಅಪ್ಲೋಡ್ ಮಾಡಿದ ಬಳಿಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? 2026ರ ಮೇ 19 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸೈಬರ್ ಅಪರಾಧ ತಡೆಗಟ್ಟುವ ರಾಷ್ಟ್ರೀಯ ಕಾರ್ಯದಲ್ಲಿ ಭಾಗಿಯಾಗಲು ಆಸಕ್ತ ಹಾಗೂ ಅರ್ಹ ತಾಂತ್ರಿಕ ವೃತ್ತಿಪರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಐ4ಸಿ ಮನವಿ ಮಾಡಿದೆ. ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation ಚೆಸ್ಕಾಂನಲ್ಲಿ ಉದ್ಯೋಗಾವಕಾಶ: 200 ಹುದ್ದೆಗಳಿಗೆ ನೇಮಕಾತಿ ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: 11,127 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ