ಬೆಂಗಳೂರು, ಏಪ್ರಿಲ್ 6: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆ (PU Board) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು (Karnataka 2nd PUC Result) ಮಂಗಳವಾರ (ಏಪ್ರಿಲ್ 7) ದಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಇನ್ನೂ ಅಧಿಕೃತ ಘೋಷಣೆ ಹೊರಬಂದಿಲ್ಲ. ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17ರವರೆಗೆ ನಡೆದಿದ್ದವು. ಕಳೆದ ವರ್ಷ ಏಪ್ರಿಲ್ 8ರಂದು ಫಲಿತಾಂಶ ಪ್ರಕಟವಾಗಿತ್ತು. ಈ ಬಾರಿ ಒಂದು ದಿನ ಮುನ್ನ ಏಪ್ರಿಲ್ 7 ರಂದು ಪ್ರಕಟವಾಗುವ ನಿರೀಕ್ಷೆ ಇದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಕೆಳಗಿನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in, kseab.karnataka.gov.in. ಇವುಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಾದರೆ, ಡಿಜಿಲಾಕರ್ ಮೂಲಕವೂ ಫಲಿತಾಂಶ ನೋಡಲು ಅವಕಾಶ ಇದೆ. ಫಲಿತಾಂಶ ಪರಿಶೀಲಿಸುವ ವಿಧಾನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ “PUC Result 2026” ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ “Submit” ಮೇಲೆ ಕ್ಲಿಕ್ ಮಾಡಿ ಫಲಿತಾಂಶವನ್ನು ಡೌನ್‌ಲೋಡ್ ಅಥವಾ ಪ್ರಿಂಟ್‌ಔಟ್ ತೆಗೆದುಕೊಳ್ಳಬಹುದು ಡಿಜಿಲಾಕರ್‌ನಲ್ಲೂ ಲಭ್ಯ ಡಿಜಿಲಾಕರ್ (digilocker.gov.in) ವೆಬ್‌ಸೈಟ್‌ನಲ್ಲೂ ಫಲಿತಾಂಶ ಲಭ್ಯವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಈ ಕುರಿತು ಈಗಾಗಲೇ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳು ಸುಲಭವಾಗಿ ಮತ್ತು ಸುರಕ್ಷಿತವಾಗಿ ಫಲಿತಾಂಶ ಪಡೆಯಬಹುದು ಎಂದು ತಿಳಿಸಿದೆ. ಫಲಿತಾಂಶದಲ್ಲಿ ಇರುವ ವಿವರಗಳು ಫಲಿತಾಂಶದಲ್ಲಿ ವಿದ್ಯಾರ್ಥಿಯ ಹೆಸರು, ನೋಂದಣಿ ಸಂಖ್ಯೆ, ವಿಷಯವಾರು ಅಂಕಗಳು, ಒಟ್ಟು ಅಂಕಗಳು ಮತ್ತು ಪಾಸ್/ಫೇಲ್ ಸ್ಥಿತಿ ಸೇರಿದಂತೆ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ. ವಿದ್ಯಾರ್ಥಿಗಳಿಗೆ ಸೂಚನೆ ಫಲಿತಾಂಶ ಪ್ರಕಟವಾದ ತಕ್ಷಣ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಟ್ರಾಫಿಕ್ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಶಾಂತವಾಗಿ ಮತ್ತೆ ಪ್ರಯತ್ನಿಸುವಂತೆ ಶಿಕ್ಷಣ ಇಲಾಖೆ ಸಲಹೆ ನೀಡಿದೆ. ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation English Grammar ಪಾಠ 10: What is an Adverb? ಕ್ರಿಯಾವಿಶೇಷಣ ಎಂದರೇನು? Karnataka 2nd PUC Result 2026:- ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಮಧು ಬಂಗಾರಪ್ಪ