Karnataka 2nd PUC Results 2026 Declaredದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು, ಏಪ್ರಿಲ್ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ Karnataka School Examination and Assessment Board (KSEAB) 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು (2nd PUC Result) ಪ್ರಕಟಿಸಿದೆ. ಆನ್​​ಲೈನ್​​ ನಲ್ಲಿ ಫಲಿತಾಂಶ ಪ್ರಕಟವಾಗಿದೆ.

 ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು ಸಂಜೆ 6ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ  ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ  ಪ್ರಕಟಿಸಲಿದ್ದಾರೆ. ಇದಕ್ಕೂ ಮೊದಲು ಆನ್​​ಲೈನ್​​ನಲ್ಲಿ https://karresults.nic.in ವೆಬ್​​ಸೈಟ್ ಮೂಲಕ ಫಲಿತಾಂಶವನ್ನು ಪರಿಶೀಲನೆ ಮಾಡಬಹುದು. 

ಫಲಿತಾಂಶ ನೋಡುವುದು ಹೇಗೆ?

ಇದೇ ಮೊದಲ ಬಾರಿ ಫಲಿತಾಂಶದ ಜತೆಗೇ ಅಂಕಪಟ್ಟಿಯೂ ಲಭ್ಯವಿದ್ದು, ಡಿಜಿಲಾಕರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

https://karresults.nic.in ಹಾಗೂ ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕ ಪಡೆಯುಬಹುದು. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್, ಎಸ್‌ಎಂಎಸ್ ಮೂಲಕವೂ ಫಲಿತಾಂಶವನ್ನು ರವಾನಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್‌ ನಿಟ್ಟಾಲಿ ಮಾಹಿತಿ ನೀಡಿದ್ದಾರೆ.

2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ-1 ಫೆ.28ರಿಂದ ಆರಂಭವಾಗಿ ಮಾರ್ಚ್ 17ರವರೆಗೆ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದವು. 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿ ಕೊಂಡಿದ್ದರು. ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.

ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *