ಬೆಂಗಳೂರು, ಏಪ್ರಿಲ್ 27: ಬೇಸಿಗೆ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಆಲಿಕಲ್ಲು ಮಳೆ ಮಾವು ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ. ಏಪ್ರಿಲ್ 30 ರವರೆಗೆ ರಾಜ್ಯಾದ್ಯಂತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಾದ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಂಗಳವಾರ ಏಪ್ರಿಲ್ 28 ರಿಂದ 3ರವರೆಗೆ ಆಲಿಕಲ್ಲು ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಮೈಸೂರು, ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಎಲ್ಲ ಜಿಲ್ಲೆಗಳಲ್ಲಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಜನರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಕೋರಿದೆ. ಬೇಸಿಗೆಯಲ್ಲಿ ಸುರಿಯುವ ಈ ಮಳೆ ಮಾವು, ಗೋಡಂಬಿ ಮತ್ತು ನಿಂಬೆ ಬೆಳೆಗಾರರಿಗೆ ಹಾನಿ ಉಂಟುಮಾಡುತ್ತದೆ. ಆಲಿಕಲ್ಲು ಬಡಿದು, ಹಣ್ಣು ಮತ್ತು ಹೂವು ಉದುರುತ್ತವೆ. ಇದರಿಂದ ರೈತರಿಗೆ ಅಪಾರ ನಷ್ಟ ಉಂಟಾಗುತ್ತದೆ. ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation ರವಿವಾರ ವಿಧಾನಸೌಧ ರಸ್ತೆ ಸೇರಿದಂತೆ ಬೆಂಗಳೂರಿನ ಹಲವು ರೋಡ್ಗಳು ಬಂದ್ ಬಂದ್ ಬಂದ್ ಜೂನ್ಗಿಂತಲೂ ಮೊದಲೇ ಭಾರತಕ್ಕೆ ಮುಂಗಾರು ಪ್ರವೇಶ ಸಾಧ್ಯತೆ