KCET Exam 2026: 2nd PUC Best of 2 exam scores will count said KEAಕೆಇಎ

ಬೆಂಗಳೂರು, ಏಪ್ರಿಲ್‌ 14: ದ್ವಿತೀಯ ಪಿಯುಸಿ (2nd PUC) ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ-1 ಮತ್ತು ಪರೀಕ್ಷೆ-2ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೋ ಆ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣಿಸಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಿಳಿಸಿದೆ.

ಕೆಲ ಅಭ್ಯರ್ಥಿಗಳು ಪರೀಕ್ಷೆ-1ರಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆ ಕೂಡ ತೆಗೆದುಕೊಳ್ಳುತ್ತಾರೆ. ಅಂತಹವರಿಗೆ ಕಳೆದ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನು ಸಿಇಟಿ ರ್ಯಾಂಕ್‌ಗೆ ಪರಿಗಣಿಸಲಾಗುತ್ತದೆ ಎಂದು ಕೆಇಎಯ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌. ಪ್ರಸನ್ನ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕರ್ನಾಟಕ ಜನರಿಗೆ ಸಿಹಿ ಸುದ್ದಿ: ಏರೋಸ್ಪೇಸ್‌ ಕ್ಷೇತ್ರದಲ್ಲಿ 1,356 ಕೋಟಿ ರೂ. ಹೂಡಿಕೆ, 1,350 ಉದ್ಯೋಗ ಸೃಷ್ಟಿ

ದ್ವಿತೀಯ ಪಿಯುಸಿಯ ಎರಡೂ ಪರೀಕ್ಷೆಗಳ ಫಲಿತಾಂಶ ಬಂದ ನಂತರವೇ ಸಿಇಟಿ ಫಲಿತಾಂಶ ಪ್ರಕಟಿಸುವುದು. ಹೀಗಾಗಿ ಎರಡನೇ ಪರೀಕ್ಷೆಯ ಅಂಕಗಳನ್ನು ಪರಿಗಣಿಸುವುದಿಲ್ಲ ಎನ್ನುವುದು ಸುಳ್ಳು. ಕರ್ನಾಟಕ ರಾಜ್ಯ ಪಠ್ಯ ಕ್ರಮದ ಪಿಯುಸಿ ಅಭ್ಯರ್ಥಿಗಳಿಗೆ ಮಾತ್ರ ಈ ಎರಡು ಪರೀಕ್ಷೆಗಳ ನಿಯಮ ಅನ್ವಯವಾಗುತ್ತದೆ. ಉಳಿದಂತೆ ಕೇಂದ್ರ ಹಾಗೂ ಇತರ ರಾಜ್ಯಗಳ ಬೋರ್ಡ್‌ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಅನ್ವಯಿಸುದಿಲ್ಲ ಎಂದರು.

ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *