Mobile Ban for Under 16 in Karnatakaಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 23: ಅಪ್ರಾಪ್ತ 16 ವರ್ಷದೊಳಗಿನವರಿಗೆ ಮೊಬೈಲ್‌ (Mobile) ಬಳಕೆ ನಿಷೇಧಿಸುವ (Under 16 Mobile Ban) ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಇಡೀ ದಿನ ನಡೆದ ಕುಲಪತಿಗಳ ಸಮ್ಮೇಳನದ ಬಳಿಕ ಸಂಜೆ ಸಮಾರೋಪ ಸಮಾರಂಭದಲ್ಲಿ ಹೇಳಿದ್ದಾರೆ.

ಸರ್ಕಾರದ ಈ ಚಿಂತನೆಗೆ ಶನಿವಾರ ನಡೆದ ರಾಜ್ಯದ ವಿಶ್ವವಿದ್ಯಾಲಯಗಳ ಪ್ರಗತಿಪರಿಶೀಲನಾ ಸಭೆಯಲ್ಲಿ ಅಭಿಪ್ರಾಯ ಪಡೆದಿದ್ದು ಬಹುತೇಕ ಕುಲಪತಿಗಳು ಸಹಮತ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ, ಯುರೋಪ್‌ನ ಕೆಲ ರಾಷ್ಟ್ರಗಳಲ್ಲಿ 16 ವರ್ಷದೊಳಗಿನ ಮೊಬೈಲ್‌ ಬ್ಯಾನ್‌ ಮಾಡಲಾಗಿದೆ ಎಂದು ತಿಳಿಸಿದರು.

ನಮ್ಮ ರಾಜ್ಯದಲ್ಲೂ ಬಹಳಷ್ಟು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ವೀಕ್ಷೆಣೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರಿಂದ ಅವರು ತರಗತಿ ಓದಿನ ಜೊತೆಗೆ ವೈಚಾರಿಕ, ವೈಜ್ಙಾನಿಕ ಹಾಗೂ ಮೌಲ್ಯಾಧಾರಿತ ಶಿಕ್ಷಣದಿಂದ ವಂಚಿತರಾಗಿ ಹಾಳಾಗುತ್ತಿರುವುದನ್ನು ಕಾಣುತ್ತಿದ್ದೇವೆ ಎಂದರು.

ಮೊಬೈಲ್‌ ಬಳಕೆ ನಿಷೇಧ ವಿಚಾರ ಚರ್ಚೆಯಲ್ಲಿದೆ: ಡಿಸಿಎಂ

ಈ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮಾತನಾಡಿ, ಶಾಲೆಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸುವ ವಿಚಾರ ಚರ್ಚೆಯಲ್ಲಿದೆ. ಮೊಬೈಲ್‌ ನಿಷೇಧದ ಬಗ್ಗೆ ಪೋಷಕರಿಂದಲೂ ಒತ್ತಡವಿದೆ. ಅನೇಕ ದೇಶಗಳಲ್ಲಿ ಈಗಾಗಲೇ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಈ ವಿಷಯ ಚರ್ಚೆಯಾಗುತ್ತಿದೆ ಎಂದರು.

ʼನಮ್ಮ ಶಾಲೆಗಳಲ್ಲಿ ಮೊಬೈಲ್‌ ನಿಷೇಧ ಮಾಡಿದ್ದೇವೆ. ಯಾವ ರೀತಿ ಮೊಬೈಲ್‌  ಬಳಕೆ ದುರುಪಯೋಗವಾಗುತ್ತಿದೆ ಎಂದು ಬಹಿರಂಗಪಡಿಸಲು ಆಗುವುದಿಲ್ಲ. ಅದಕ್ಕೆ ಈ ವಿಚಾರ ಚರ್ಚೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *