ನವದೆಹಲಿ, ಮೇ 12: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಮೇ 3 ರಂದು ದೇಶಾದ್ಯಂತ ನಡೆದಿದ್ದ 2026ರ ನೀಟ್-ಯುಜಿ (NEET UG) ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತವಾಗಿ ರದ್ದುಗೊಳಿಸಿದೆ. ಈ ಗಂಭೀರ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿದೆ. ಪರೀಕ್ಷೆ ರದ್ದಾಗಿರುವ ಬಗ್ಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವ್ಯಾಪಕ ಆಕ್ರೋಶ ಹಾಗೂ ಆತಂಕ ವ್ಯಕ್ತವಾಗಿದೆ. ಪ್ರಕರಣ ಸಂಬಂದ ನಾಸಿಕ್‌ನ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಶುಭಂ ಖೈರ್ನಾರ್ ಎಂಬುವರನ್ನು ನೀಟ್ ಬಂಧಿಸಲಾಗಿದ್ದು, ಅವರನ್ನು ರಾಜಸ್ಥಾನ ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ. ಈ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (CBI) ಗೆ ನೀಡಲಾಗಿದ್ದು, ಪರೀಕ್ಷೆಗೆ ಸಂಬಂಧಿಸಿದ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತದೆ. ಮರುಪರೀಕ್ಷೆ ಯಾವಾಗ? ಪ್ರಸ್ತುತ ಮಾಹಿತಿ ಪರೀಕ್ಷೆಯು ರದ್ದಾಗಿರುವುದರಿಂದ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಮರು ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಎನ್‌ಟಿಎ ತಿಳಿಸಿದೆ. ಪರೀಕ್ಷೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಗಳು, ಮರುಪರೀಕ್ಷೆಯ ದಿನಾಂಕಗಳು ಹಾಗೂ ಇತರೆ ಮಾಹಿತಿಗಾಗಿ NTA ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. NEET ಪರೀಕ್ಷೆಗೆ ವಿದ್ಯಾರ್ಥಿಗಳು ಈ ಮೊದಲು ಸಲ್ಲಿಸಿದ ನೋಂದಣಿ ಮಾಹಿತಿ, ಅಭ್ಯರ್ಥಿ ವಿವರಗಳು ಹಾಗೂ ಆಯ್ಕೆ ಮಾಡಿದ್ದ ಪರೀಕ್ಷಾ ಕೇಂದ್ರಗಳು ಮರುಪರೀಕ್ಷೆಯಲ್ಲಿಯೂ ಮಾನ್ಯವಾಗಿರುತ್ತವೆ ಎಂದು ಎನ್‌ಟಿಎ ತಿಳಿಸಿದೆ. ವಿದ್ಯಾರ್ಥಿಗಳು ಮತ್ತೆ ಹೊಸದಾಗಿ ನೋಂದಣಿ ಮಾಡಿಕೊಳ್ಳುವ ಅಗತ್ಯವಿಲ್ಲ ಹಾಗೂ ಯಾವುದೇ ಹೆಚ್ಚುವರಿ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಈಗಾಗಲೇ ಪಾವತಿಸಿರುವ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಮರುಪಾವತಿಸಲಾಗುತ್ತದೆ. ಮರುಪರೀಕ್ಷೆಯನ್ನು NTA ತನ್ನ ಆಂತರಿಕ ಸಂಪನ್ಮೂಲಗಳನ್ನು ಬಳಸಿ ನಡೆಸಲಿದೆ. ಈ ಪರೀಕ್ಷೆಯನ್ನು ಭಾರತದಲ್ಲಿನ 551 ನಗರಗಳು ಹಾಗೂ ವಿದೇಶಗಳ 14 ನಗರಗಳಲ್ಲಿ, ಒಟ್ಟು 5,432ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಡೆಸಲಾಗಿತ್ತು. ಸುಮಾರು 22.79 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಪರೀಕ್ಷೆಯಲ್ಲಿ ಒಟ್ಟು 720 ಅಂಕಗಳಿಗೆ 180 ಪ್ರಶ್ನೆಗಳು ಇದ್ದವು. ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation English Grammar ಪಾಠ 17: Future Tense ನೀಟ್ ಆಕಾಂಕ್ಷಿಗಳೇ ಗಮನಿಸಿ.. NEET-UG ಮರುಪರೀಕ್ಷೆ ದಿನಾಂಕ ಫಿಕ್ಸ್!