ನವದೆಹಲಿ, ಮೇ 15: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA), NEET–UG ಮರು ಪರೀಕ್ಷೆಯನ್ನು ಜೂನ್ 21ರಂದು ನಡೆಸಲಾಗುವುದು ಎಂದು ಅಧಿಕೃತವಾಗಿ ಘೋಷಿಸಿದೆ. ಹೌದು, ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ತಡರಾತ್ರಿ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಸಭೆಯ ಬಳಿಕ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿಗೆ ಹೊಸ ಪರೀಕ್ಷಾ ದಿನಾಂಕವನ್ನು ಘೋಷಿಸಲಾಗಿದ್ದು, ಜೂನ್ 21ರಂದು ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ಆರೋಪಗಳ ಹಿನ್ನೆಲೆ ಮೇ 3ರಂದು ನಡೆದಿದ್ದ NEET ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ. ಪ್ರಕರಣ ಸಂಬಂಧ ಕೇಂದ್ರೀಯ ತನಿಖಾ ದಳ (CBI) ಈಗಾಗಲೇ ತನಿಖೆ ನಡೆಸುತ್ತಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ. ಪರೀಕ್ಷೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಎನ್‌ಟಿಎ ಅಧಿಕೃತ ವೆಬ್‌ಸೈಟ್ ಮತ್ತು ಅಧಿಕೃತ ಸಾಮಾಜಿಕ ಜಾಲತಾಣಗಳನ್ನೇ ಅವಲಂಬಿಸಬೇಕು ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮನವಿ ಮಾಡಿದೆ. ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation NEET ಮರು ಪರೀಕ್ಷೆ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ NEET ಎಕ್ಸಾಂನಲ್ಲಿ ಭಾರಿ ಬದಲಾವಣೆ: ಇನ್ಮುಂದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ