ಹುಬ್ಬಳ್ಳಿ, ಫೆಬ್ರವರಿ 16: ನಗರದ ಬಿವಿಬಿ (BVB) ಮಹಾವಿದ್ಯಾಲಯದಲ್ಲಿ ಸಂಭವಿಸಿದ್ದ ನೇಹಾ ಹಿರೇಮಠ (Neha Hiremath) ಕೊಲೆ ಆರೋಪಿ ಫಯಾಜ್‌ನ (Fayaz) ಜಾಮೀನು ಅರ್ಜಿಯನ್ನು ಕರ್ನಾಟಕ (Karnataka) ಹೈಕೋರ್ಟ್‌ನ ಧಾರವಾಡ ಪೀಠ ವಜಾಗೊಳಿಸಿದೆ. ಆ ಮೂಲಕ ಮತ್ತೆ ಜೈಲೇ ಗತಿ ಆಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಹಿರೇಮಠ ಕೊಲೆಯಾಗಿತ್ತು. ಪ್ರಕರಣದ ಹಿನ್ನೆಲೆ 2024ರ ಏಪ್ರಿಲ್ 18 ರಂದು ಹುಬ್ಬಳ್ಳಿ ನಗರದ ಬಿವಿಬಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠರನ್ನು ಆರೋಪಿ ಫಯಾಜ್ 14 ಬಾರಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದನು. ಆರೋಪಿ ಫಯಾಜ್ ನೇಹಾ ಹಿರೇಮಠರನ್ನು ಕೊಲೆ ಮಾಡಿ ಪರಾರಿಯಾಗಿದ್ದನು. ಕೂಡಲೆ ಕಾಲೇಜು ಆವರಣದಲ್ಲಿದ್ದ ವಿದ್ಯಾರ್ಥಿಗಳು ನೇಹಾರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಿದರು. ಅಷ್ಟೊತ್ತಿಗಾಗಲೆ ನೇಹಾ ಹಿರೇಮಠ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೊಲೀಸರು ಆರೋಪಿ ಫಯಾಜ್ನನ್ನು ಬಂಧಿಸಿದ್ದರು. ಈ ಕೊಲೆ ಪ್ರಕರಣವು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಈ ಕೊಲೆ ಪ್ರಕರಣದ ಹಿಂದೆ ಲವ್ ಜಿಹಾದ್ ಇದೆ ಎಂದು ಹಿಂದೂ ಪರ ಸಂಘಟನೆಗಳು ಮತ್ತು ಮುಖಂಡರು ಆರೋಪ ಮಾಡಿದ್ದರು. ಈ ಕೊಲೆ ಹಿಂದೆ ಲವ್ ಜಿಹಾದ್ ಇದೆ ಎಂದು ಹಿಂದೂ ಸಂಘಟನೆಗಳು ಹೋರಾಟಗಳನ್ನು ಮಾಡಿದ್ದವು. ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ್ದ ಸರ್ಕಾರ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಆರೋಪಿಗೆ ಜೈಲು ಶಿಕ್ಷೆಯಾಗುವಂತೆ ಮಾಡುತ್ತೇವೆ ಎಂದಿತ್ತು. ಪ್ರಕರಣದ ತನಿಖೆ ನಡೆಸಿದ ಸಿಐಡಿ ಘಟನೆ ದೇಶಾದ್ಯಂತ ಚರ್ಚೆಯಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದರು. ಅಲ್ಲದೇ, ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವಹಿಸಿಕೊಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದರು. ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation ಸಿದ್ಧಾರೂಢರ ಶಿವರಾತ್ರಿ ಜಾತ್ರೆ: ರಥೋತ್ಸವದ ವಿಡಿಯೋ ನೋಡಿ