ಗದಗ, ಮಾ.02: ಪ್ರೊಫೆಸರ್ ಮಲಕಪ್ಪ ಹಳ್ಳಿಗುಡಿ ಅವರಿಗೆ ಡಾ.ವಿ.ಬಿ ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ (ರಿ) ಹಾಗೂ ಡಾ.ವಿ.ಬಿ ಹಿರೇಮಠ ಮಹಾವೇದಿಕೆ ಹಾಗೂ ಅಶ್ವಿನಿ ಪ್ರಕಾಶನ ನೀಡಲಾಗುವ ಗುರು ಪುಟ್ಟರಾಜ (Puttaraj Gawai) ಕವಿ ಗವಾಯಿಗಳವರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡ ನಾಡು ನುಡಿ, ನೆಲ-ಜಲ, ಕಲೆ, ಸಂಗೀತ, ಸಾಹಿತ್ಯ, ಸಂಸ್ಕೃತಿ, ರಂಗಭೂಮಿ, ಜಾನಪದ, ಕೃಷಿ, ವೈದ್ಯಕೀಯ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಗುರುತಿಸಿ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರೊಫೆಸರ್ ಮಲಕಪ್ಪ ಹಳ್ಳಿಗುಡಿ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿಮ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಇದನ್ನೂ ಓದಿ: ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಆರಾಧನಾ ಜಂಬಣ್ಣವರ ಆಯ್ಕೆ ಮಂಗಳವಾರ (ಮಾ.03) ಗದಗದಲ್ಲಿ ಡಾ. ವಿ.ಬಿ ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ ರಿ, ಗದಗ ಹಾಗೂ ಅಶ್ವಿನಿ ಪ್ರಕಾಶನ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ 112ನೇ ಜಯಂತೋತ್ಸವ ಸಮಾರಂಭದ ಸಾಂಸ್ಕೃತಿಕ ಕಾರ್ಯಕ್ರಮದ ಪ್ರಶಸ್ತಿ ಪುರಸಾರ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ. ಮಲಕಪ್ಪ ರಾಮಪ್ಪ ಹಳ್ಳಿಗುಡಿ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಕಡಕೋಳ ಗ್ರಾಮದಲ್ಲಿ ಹಾಗೂ ಪದವಿ ಪೂರ್ವ ಶಿಕ್ಷಣವು ಕೂಡ ಕಡಕೋಳ ಗ್ರಾಮದಲ್ಲಿ ಪೂರೈಸಿದ್ದಾರೆ. ತದನಂತರ ಪದವಿ ಶಿಕ್ಷಣವನ್ನು ಗದಗಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕನಕದಾಸ ಶಿಕ್ಷಣ ಸಂಸ್ಥೆಯಲ್ಲಿ ಪೂರ್ಣಗೊಳಿಸಿದರು. ತದನಂತರ ಸ್ನಾತಕೋತ್ತರ ಅಧ್ಯಯನವನ್ನು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಮಾಡಿದ್ದಾರೆ. ಕಳೆದ ಎಂಟು ವರ್ಷಗಳಿಂದ ಕನಕದಾಸ ಶಿಕ್ಷಣ ಸಮಿತಿಯಲ್ಲಿ ಪದವಿ ವಿಭಾಗದಲ್ಲಿ ಸಮಾಜಶಾಸ್ತ್ರ ವಿಷಯದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಕೆಎಲ್ಇ ಸಂಸ್ಥೆಯಲ್ಲೂ ಕೂಡ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಗುರುತಿಸಿ, ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗಿದೆ. ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಆರಾಧನಾ ಜಂಬಣ್ಣವರ ಆಯ್ಕೆ ಪುಟ್ಟರಾಜ ಗವಾಯಿಗಳ 112ನೇ ಜಯಂತಿ: ಮೇಘರಾಗ ಹಾಡಿ ಮಳೆ ತರಿಸಿದ ಶ್ರೀಗರು