PM Kisan 22nd Installment Date: E-KYC Compulsoryಸಾಂದರ್ಭಿಕ ಚಿತ್ರ

Pradhan Mantri Kisan Samman Nidhi Yojana (PM-KISAN) ಯೋಜನೆಯ 22ನೇ ಕಂತು ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆ ಇದೆ. ಇ-ಕೆವೈಸಿ ಪೂರ್ಣಗೊಳಿಸಿದ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆಯಾಗಲಿದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಎಂದರೇನು?

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ರೈತರ ಕಲ್ಯಾಣಕ್ಕಾಗಿ 2018ರಲ್ಲಿ ಆರಂಭಿಸಲಾಯಿತು. ಈ ಯೋಜನೆಯಡಿ ಅರ್ಹ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ₹2,000ರಂತೆ ವರ್ಷಕ್ಕೆ ಒಟ್ಟು ₹6,000 ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಈಗಾಗಲೇ 21 ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. ಕೊನೆಯ ಕಂತು 2025ರ ನವೆಂಬರ್ 19ರಂದು ಬಿಡುಗಡೆಗೊಂಡಿತ್ತು.

ಫಲಾನುಭವಿಗಳ ದಾಖಲೆ ಮರುಪರಿಶೀಲನೆ

22ನೇ ಕಂತಿನ ಬಿಡುಗಡೆಗೆ ಮುನ್ನ ಸರ್ಕಾರ ದೊಡ್ಡ ಮಟ್ಟದಲ್ಲಿ ಫಲಾನುಭವಿಗಳ ದಾಖಲೆ ಮರುಪರಿಶೀಲನೆ ನಡೆಸಿದೆ. e-KYC ಪರಿಶೀಲನೆ, ಭೂ ದಾಖಲೆಗಳ ಪರಿಶೀಲನೆ ಹಾಗೂ ಮರುದೃಢೀಕರಣದ ನಂತರ ಕೆಲವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.

ಹೆಸರುಗಳನ್ನು ಏಕೆ ತೆಗೆದುಹಾಕಲಾಗುತ್ತಿದೆ?

ಯೋಜನೆ ಹೆಚ್ಚು ಪಾರದರ್ಶಕವಾಗಲು ಹಾಗೂ ಅರ್ಹರು ಮಾತ್ರ ಯೋಜನೆಯ ಲಾಭ ಪಡೆಯಲು ಸರ್ಕಾರ ಈ ಕ್ರಮ ಕೈಗೊಂಡಿದೆ.

1. ಭೂ ದಾಖಲೆ ಪರಿಶೀಲನೆ:

2019ರ ಫೆಬ್ರವರಿ 1 ನಂತರ ತಮ್ಮ ಹೆಸರಿನಲ್ಲಿ ಭೂಮಿ ನೋಂದಾಯಿಸಿಕೊಂಡವರ ವಿವರಗಳನ್ನು ವಿಶೇಷವಾಗಿ ಪರಿಶೀಲಿಸಲಾಗುತ್ತಿದೆ. ಭೂಸ್ವಾಮ್ಯವು ಪ್ರಮುಖ ಅರ್ಹತಾ ಮಾನದಂಡವಾಗಿರುವುದರಿಂದ ದಾಖಲೆಗಳಲ್ಲಿ ವ್ಯತ್ಯಾಸ ಕಂಡುಬಂದರೆ  ಫಲಾನುಭವಿಯ ಪಟ್ಟಿಯಿಂದ ಹೆಸರು ಕೈಬಿಡಬಹುದು.

2. ಒಂದು ಕುಟುಂಬಕ್ಕೆ ಒಬ್ಬರಿಗೆ ಮಾತ್ರ ಹಣ:

ಗಂಡ, ಹೆಂಡತಿ ಮತ್ತು ಮಕ್ಕಳು ಒಂದೇ ಕುಟುಂಬವೆಂದು ಪರಿಗಣಿಸಲಾಗುತ್ತದೆ. ಕುಟುಂಬದಲ್ಲಿ ಒಬ್ಬರಿಗಷ್ಟೇ ಈ ಯೋಜನೆಯ ಲಾಭ ಸಿಗುತ್ತದೆ. ಗಂಡ ಮತ್ತು ಹೆಂಡತಿ ಇಬ್ಬರೂ ಕಂತು ಪಡೆಯುತ್ತಿದ್ದರೆ, ಅಂತಹ ಪ್ರಕರಣಗಳಲ್ಲಿ ಹಣ ನಿಲ್ಲಿಸಲಾಗಿದೆ.

ಪಟ್ಟಿಯನ್ನು ಹೇಗೆ ಪರಿಶೀಲಿಸುವುದು?

ಅರ್ಹ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ಅಧಿಕೃತ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡಿ.

ಮುಖಪುಟದಲ್ಲಿ “Know Your Status” ಆಯ್ಕೆಯನ್ನು ಕ್ಲಿಕ್ ಮಾಡಿ.

ನಂತರ CAPTCHA ಕೋಡ್ ಹಾಗೂ ನೋಂದಣಿ ಸಂಖ್ಯೆಯನ್ನು ನಮೂದಿಸಿ.

ಮಾಹಿತಿ ನವೀಕರಿಸಲು ಮುಖಪುಟದಲ್ಲಿರುವ ಸಂಬಂಧಿತ ಆಯ್ಕೆಯನ್ನು ಬಳಸಬಹುದು.

22ನೇ ಕಂತು ಯಾವಾಗ ಬಿಡುಗಡೆ?

ಸರ್ಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಆದರೆ ಈ ವಾರ ಅಥವಾ ಮುಂದಿನ ವಾರ 22ನೇ ಕಂತು ಬಿಡುಗಡೆಯಾಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಶೀಘ್ರದಲ್ಲೇ ಅಧಿಕೃತ ಮಾಹಿತಿ ನೀಡುವ ನಿರೀಕ್ಷೆಯಿದೆ.

ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *