ಮುಂಬೈ, ಏಪ್ರಿಲ್ 12: ಹಿರಿಯ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರು ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರಿಗೆ ಶನಿವಾರ (ಏ.11) ಹೃದಯ ಸ್ತಂಭನ ಉಂಟಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ, ಡಾ ಪ್ರತೀಕ್ ಸಂಧಾನಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘ಆಶಾ ಭೋಸ್ಲೆ ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನ ಹೊಂದಿದ್ದಾರೆ’ ಎಂದಿದ್ದಾರೆ. ಆಶಾ ಭೋಸ್ಲೆ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಂಗೀತ ಕ್ಷೇತ್ರದ ಸೆಲಬ್ರಿಟಿಗಳು, ಆಶಾ ಭೋಸ್ಲೆ ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದರು, ಆದರೆ ಪ್ರಾರ್ಥನೆ ಫಲ ನೀಡಿಲ್ಲ. ಆಶಾ ಭೋಸ್ಲೆ ಅವರು ನಿಧನ ಹೊಂದಿದ್ದು, ಭಾರತೀಯ ಚಿತ್ರರಂಗ ಅದ್ಭುತ ಗಾಯಕಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಆಶಾ ಭೋಸ್ಲೆ ಅವರು ಹಿಂದಿ, ಕನ್ನಡ, ಮರಾಠಿ, ತಮಿಳು, ತೆಲುಗು, ಮಲಯಾಳಂ, ಅಸ್ಸಾಮೀಸ್, ಭೋಜ್ಪುರಿ, ನೇಪಾಳಿ, ಬೆಂಗಾಲಿ ಇನ್ನೂ ಹಲವು ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ಗಾಯನಕ್ಕೆ ಎರಡು ರಾಷ್ಟ್ರಪ್ರಶಸ್ತಿ ಸೇರಿದಂತೆ, ಏಷ್ಯಾ ನೈಟಿಂಗೇಲ್, ಲತಾ ಮಂಗೇಶ್ಕರ್ ಪ್ರಶಸ್ತಿ, ಹಲವಾರು ಫಿಲಂ ಫೇರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆಶಾ ಅವರ ಹಾಡುಗಳು ಮೂರು ಬಾರಿ ಪ್ರತಿಷ್ಠಿತ ಗ್ರಾಮಿಗೆ ನಾಮಿನೇಟ್ ಸಹ ಆಗಿದ್ದವು. ಸುಮಾರು ಲಕ್ಷಕ್ಕೂ ಹೆಚ್ಚು ಹಾಡುಗಳನ್ನು ಅವರು ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ. ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation ಗಂಟೆಗೆ 220 ಕಿಮೀ ಸಂಚರಿಸುವ ರೈಲು: ಹುಬ್ಬಳ್ಳಿಯಿಂದ ಬೆಂಗಳೂರಿಗೆ 2 ಗಂಟೆ ಪ್ರಯಾಣ ಸಿಯಾಚಿನ್ ದಿನ: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಭಾರತೀಯ ಸೇನೆಯ ಅಪ್ರತಿಮ ಸಾಹಸ