ಬೆಂಗಳೂರು, ಫೆಬ್ರವರಿ 20: ಮುಡಾ (Muda) ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಅವರನ್ನು ಸಿಸಿಬಿ (CCB) ಅಧಿಕಾರಿಗಳು ಬಂಧಿಸಿದ್ದಾರೆ. ಸ್ನೇಹಮಯಿ ಕೃಷ್ಣ ಅವರು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ ಆರೋಪ ಮಾಡಿದ್ದರು. ಮುಡಾ ಮಾಜಿ ಮಾಜಿ ಆಯುಕ್ತ ಡಿಬಿ ನಟೇಶ್ ಬಡ್ತಿ ಪಡೆಯಲು ಶಾಲಿನಿ ರಜನೀಶ್‌ಗೆ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿಕೃಷ್ಣ ಅವರು ಗಂಭೀರ ಆರೋಪ ಮಾಡಿದ್ದರು. ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ನನ್ನ ನಕಲಿ ಫೋಟೋ ಮತ್ತು ನಕಲಿ ದಾಖಲೆ ಜೊತೆಗೆ ಧ್ವನಿ ಕ್ಲಿಪ್ ಹಾಕಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂಬುವುದನ್ನು ಡಿಬಿ ನಟೇಶ್ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಬಿ ನಟೇಶ್ ಅವರು ದೂರು ನೀಡಿದ್ದರು. ಈ ದೂರಿನ ಅನ್ವಯ ಸಿಸಿಬಿಯ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ ಮುಡಾದ ಮಾಜಿ ಆಯುಕ್ತ ಡಿಬಿ ನಟೇಶ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಹಣ ನೀಡಿ ಮುಂಬಡ್ತಿ ಪಡೆದುಕೊಂಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದರು. ಈ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ನೀಡಿದ್ದರು. ಮುಡಾ ನಿವೇಶನ ಹಂಚಿಕೆ ಹಗರಣದ ಸಂದರ್ಭದಲ್ಲಿ ಮುಡಾದ ಆಯುಕ್ತರಾಗಿದ್ದ ನಟೇಶ್ 5 ಬ್ಯಾಗ್‌ಗಳಲ್ಲಿ ಕೋಟ್ಯಾಂತರ ರೂಪಾಯಿ ಹಣವನ್ನು ನೀಡಿದ್ದಾರೆ ಎಂದು ಆರೋಪ ಮಾಡಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸ್ನೇಹಮಯಿ ಕೃಷ್ಣ ಅವರ ಬಂಧನ ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಬಿಎಂ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಇದು ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಈ ನಡುವೆ ಸಿಎಂ ಸಿದ್ದರಾಮಯ್ಯ 14 ಸೈಟುಗಳನ್ನು ಮುಡಾಗೆ ವಾಪಸ್ ನೀಡಿದ್ದರು. ಬಳಿಕ ಈ ಚರ್ಚೆಗೆ ಬ್ರೇಕ್ ಬಿದ್ದಿತ್ತು. ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕ ಕೋಲಾರದಲ್ಲಿ ಆರಂಭ: ಮೋದಿ ಚಾಲನೆ ಹೋಳಿ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಬೀದರ್, ಕಲಬುರಿಗೆ ವೀಕ್ಲಿ ಎಕ್ಸ್ಪ್ರೆಸ್ ರೈಲು ಸಂಚಾರ ಅವಧಿ ವಿಸ್ತರಣೆ