Indian Railways Jobs 2026: ದಕ್ಷಿಣ ಮಧ್ಯ ರೈಲ್ವೆ (SCR) ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕಾತಿ ಕೋಶ (RRC) ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಒಟ್ಟು ಸಾವಿರಾರು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಆಸಕ್ತರಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಎಸ್‌ಎಸ್‌ಎಲ್‌ಸಿ ಪಾಸಾದವರು ಲಿಖಿತ ಪರೀಕ್ಷೆ ಇಲ್ಲದೇ ಆಯ್ಕೆ ಆಗಲು ಇಲ್ಲಿ ಅವಕಾಶ ಇದೆ. ಈ ಹುದ್ದೆಗಳ ಮಾಹಿತಿ, ನೇಮಕಾತಿ ಪೂರ್ಣ ವಿವರ ಇತರ ಮಾಹಿತಿ ಇಲ್ಲಿದೆ. ಹುದ್ದೆಗಳ ವಿವರ ಎಲೆಕ್ಟ್ರಿಷಿಯನ್, ಫಿಟ್ಟರ್, ಎಸಿ ಮೆಕ್ಯಾನಿಕ್, ವೆಲ್ಡರ್, ಡೀಸೆಲ್ ಮೆಕ್ಯಾನಿಕ್, ಕಾರ್ಪೆಂಟರ್, ಪೇಂಟರ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಒಟ್ಟು 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಲೆಕ್ಟ್ರಿಷಿಯನ್ ವಿಭಾಗದಲ್ಲಿ 1258, ಫಿಟ್ಟರ್ ವಿಭಾಗದಲ್ಲಿ 539, ಎಸಿ ಮೆಕ್ಯಾನಿಕ್ ವಿಭಾಗದಲ್ಲಿ 251, ವೆಲ್ಡರ್ ವಿಭಾಗದಲ್ಲಿ 202, ಡೀಸೆಲ್ ಮೆಕ್ಯಾನಿಕ್ ವಿಭಾಗದಲ್ಲಿ 105, ಕಾರ್ಪೆಂಟರ್, ಪೇಂಟರ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಒಟ್ಟು 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನಾಂಕವಾಗಿದೆ. ಕರ್ನಾಟಕ ಸೇರಿಂದತೆ ತೆಲಂಗಾಣ, ಆಂಧ್ರಪ್ರದೇಶ, ಮಹರಾಷ್ಟ್ರ, ತಮಿಳುನಾಡು ಮತ್ತು ಮಧ್ಯಪ್ರದೇಶದ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಜಿ ಶುಲ್ಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ತೃತೀಯ ಲಿಂಗಿಗಳಿಗೆ ಉಚಿತ. ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 100 ರೂ. ಆಯ್ಕೆ ಪ್ರಕ್ರಿಯೆ ಅರ್ಜಿ ಸಲ್ಲಿಸುವವರು 10ನೇ ತರಗತಿಯಲ್ಲಿ ಕನಿಷ್ಠ ಶೇ. 50 ಅಂಕ ಗಳಿಸಿರಬೇಕು. ಅಭ್ಯರ್ಥಿಗಳು ಎಸಿ ಮೆಕ್ಯಾನಿಕ್, ಕಾರ್ಪೆಂಟರ್, ಸಿಒಪಿಒ, ಡೀಸೆಲ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್, ಮೆಷಿನಿಸ್ಟ್, ಎಂಎಂಟಿಎಂ, ಮೋಟಾರ್ ಮೆಕ್ಯಾನಿಕ್, ಪೇಂಟರ್, ವೆಲ್ಟರ್ ವಿಭಾಗದಲ್ಲಿ ಐಟಿಐ ಪ್ರಮಾಣಪತ್ರ ಪಡೆದಿರಬೇಕು. ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಶೈಕ್ಷಣಿಕ ಅರ್ಹತೆಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ವಯೋಮಿತಿ ಸಡಲಿಕೆ ಅಭ್ಯರ್ಥಿಗಳ ವಯೋಮಿತಿ ಅರ್ಜಿ ಸಲ್ಲಿಕೆಯ ಕೊನೆ ದಿನ ಏಪ್ರಿಲ್ 11ರ ಹೊತ್ತಿಗೆ ಕನಿಷ್ಠ 15 ರಿಂದ ಗರಿಷ್ಠ 24 ವರ್ಷ ಇರಬೇಕು. ಎಸಿ, ಎಸ್‌ಟಿಗಳಿಗೆ 5 ವರ್ಷಗಳು ಒಬಿಸಿಗಳಿಗೆ 3 ವರ್ಷಗಳು ಪಿಡಬ್ಲ್ಯೂಬಿಡಿ ಮತ್ತು ಇಎಸ್‌ಎಂ ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಸಡಲಿಕೆ ನೀಡಲಾಗುತ್ತದೆ. ಆನ್‌ಲೈನ್ ಅರ್ಜಿ ಲಿಂಕ್ ಆನ್‌ಲೈನ್ ಮೂಲಕ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ: https://scr.indianrailways.gov.in/?lang=1 ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation ಕರ್ನಾಟಕ ಹೈಕೋರ್ಟ್ನಲ್ಲಿ ನೇಮಕಾತಿ: 70 ಹುದ್ದೆಗಳಿಗೆ ಅರ್ಜಿ ಆಹ್ವಾನ BSNLನಲ್ಲಿ 120 ಹುದ್ದೆಗಳಿಗೆ ಭರ್ತಿ: ಹುದ್ದೆ ವಿವರ, ಅರ್ಜಿ ಪ್ರಕ್ರಿಯೆ, ಶುಲ್ಕ ಮಾಹಿತಿ ಇಲ್ಲಿದೆ