ಕೇಂದ್ರ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ (Ministry of Youth Affairs and Sports) ಅಧೀನದ ಅತ್ಯುನ್ನತ ರಾಷ್ಟ್ರೀಯ ಕ್ರೀಡಾ ಸಂಸ್ಥೆಯಾದ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ (SAI) ಕ್ರೀಡಾ ಸಾಧಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 323 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕ್ರೀಡಾ ತರಬೇತುದಾರರ ನೇಮಕಾತಿಗೆ ಮರುಚಾಲನೆ ನೀಡಲಾಗಿದ್ದು ಆಸಕ್ತರು ಏ.21ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಹತೆ ಅಭ್ಯರ್ಥಿಗಳು ಡಿಪ್ಲೊಮಾ ಪದವಿ ಪೂರ್ಣಗೊಳಿಸಿರಬೇಕು. ತತ್ಸಮಾನ ಕ್ರೀಡೆಗೆ ಸಂಬಂಧಿಸಿದ ವಿಷಯದಲ್ಲಿ ಪದವಿ ಉತ್ತೀರ್ಣರಾಗಿರಬೇಕು. ರಾಷ್ಟ್ರ ಅಥವಾ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ವೈಯಕ್ತಿಕ ಅಥವಾ ಗುಂಪು ವಿಭಾಗದಲ್ಲಿ ಗುರುತಿಸಿಕೊಂಡು ಪದಕ ವಿಜೇತರಾಗಿರಬೇಕು ಅಥವಾ ಸ್ಪರ್ಧೆಯಲ್ಲಿ ಭಾಗಹಿಸಿರಬೇಕು. ಯಾವುದೇ ರಾಷ್ಟ್ರೀಯ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ಪದಕ ವಿಜೇತರ ಪದಕದ ಅನುಸಾರ ಅವರಿಗೆ ಅಂಕವನ್ನು ನೀಡಲಾಗುತ್ತದೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪದಕ ವಿಜೇತರಿಗೆ ಮೊದಲ ಆದ್ಯತೆ. ಒಲಿಂಪಿಕ್ಸ್, ಪ್ಯಾರಾ ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ವರ್ಲ್ಡ್ ಚಾಂಪಿಯನ್‌ಶಿಪ್ ಮೊದಲಾದವುಗಳಲ್ಲಿ ಭಾಗವಹಿಸಿದವರಿಗೆ ಆದ್ಯತೆಯನ್ನು ನೀಡಲಾಗುತ್ತದೆ. ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತರನ್ನು ಪರಿಗಣಿಸಲಾಗುತ್ತದೆ ಅರ್ಜಿ ಸಲ್ಲಿಕೆ ಅಭ್ಯರ್ಥಿಗಳು www.sportsauthorityofindia.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಯನ್ನು ಆನ್‌ಲೈನ್ ಮೂಲಕ ಭರ್ತಿ ಮಾಡಬೇಕು. ಆಯ್ಕೆ ಪ್ರಕ್ರಿಯೆ ಆನ್‌ಲೈನ್ ಮೂಲಕ ಸ್ವೀಕರಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಎರಡು ಹಂತದಲ್ಲಿ ಅಭ್ಯರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ ಹಾಗೂ ಕೋಚಿಂಗ್ ಎಬಿಲಿಟಿ ಟೆಸ್ಟ್. ಅಭ್ಯರ್ಥಿಗಳು ಈ ಎರಡು ಹಂತದಲ್ಲಿ ಉತ್ತೀರ್ಣರಾಗಿರಬೇಕು. ಈ ಹಂತಗಳನ್ನು ಆಧರಿಸಿ ಮೆರಿಟ್ ಆಧಾರದ ಮೇಲೆ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ವಯೋಮಿತಿ ಗರಿಷ್ಠ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ, ಪ.ಪಂಗಡದವರಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಸಡಿಲಿಕೆ ಇರಲಿದೆ. ಕನಿಷ್ಠ 1 ವರ್ಷದ ಅನುಭವ ಅವಶ್ಯಕ. ಹುದ್ದೆಗಳು ಅಥ್ಲೆಟಿಕ್ಸ್- 28, ಬ್ಯಾಡ್ಮಿಂಟನ್- 26, ಬ್ಯಾಡ್ಮಿಂಟನ್-16, ಟೆನಿಸ್- 8, ಟೇಬಲ್ ಟೆನಿಸ್- 14, ವಾಲಿಬಾಲ್-10, ಬಾಸ್ಕೆಟ್ ಬಾಲ್-12, ಕಬಡ್ಡಿ- 6, ಪುಟ್‌ಬಾಲ್ – 12, ಹಾಕಿ- 13, ಅರ್ಜರಿ- 12, ಬಾಕ್ಸಿಂಗ್- 19 ಮತ್ತು ಶೂಟಿಂಗ್- 28 ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation IDBI ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ: ಅರ್ಜಿ ಹೇಗೆ? ಸಂಬಳವೆಷ್ಟು ಗೊತ್ತಾ? ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ