ಬೆಂಗಳೂರು, ಏಪ್ರಿಲ್ 23: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಫಲಿತಾಂಶ ಪ್ರಕಟವಾದ ಬಳಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರಗಳನ್ನು ಹಂಚಿಕೊಂಡರು. ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಇದು ದಾಖಲೆ ಮಟ್ಟದ ಫಲಿತಾಂಶವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಬಾರಿ ಅನೇಕ ವಿದ್ಯಾರ್ಥಿಗಳು ಪೂರ್ಣ ಅಂಕ ಪಡೆದು ಸಾಧನೆ ಮಾಡಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ ಹಾಗೂ ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕಗಳನ್ನು ಪಡೆದು ಗಮನ ಸೆಳೆದಿದ್ದಾರೆ. ಇದನ್ನೂ ಓದಿ: SSLC ಪರೀಕ್ಷೆ-1 ಫಲಿತಾಂಶ: ಯಾವ ಜಿಲ್ಲೆ ಫಸ್ಟ್? ಯಾವುದು ಲಾಸ್ಟ್? ಇಲ್ಲಿದೆ ಮಾಹಿತಿ ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 98.40ರಷ್ಟು ತೇರ್ಗಡೆಯೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆ ಶೇ. 98.18ರೊಂದಿಗೆ ಎರಡನೇ ಸ್ಥಾನದಲ್ಲಿದ್ದು, ಉತ್ತರ ಕನ್ನಡ ಶೇ. 98.09ರೊಂದಿಗೆ ಮೂರನೇ ಸ್ಥಾನ ಹಾಗೂ ಹಾಸನ ಜಿಲ್ಲೆ ಶೇ. 97.51ರೊಂದಿಗೆ ನಾಲ್ಕನೇ ಸ್ಥಾನದಲ್ಲಿವೆ. ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಇದರ ಜೊತೆಗೆ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಲು ಅವಕಾಶ ನೀಡಲಾಗಿದೆ. ಹಾಗೆಯೇ, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಫಲಿತಾಂಶದ ವಿವರಗಳನ್ನು ಮಂಡಳಿಯೇ ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ನೇರವಾಗಿ ರವಾನಿಸುತ್ತಿದೆ. ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation SSLC Result 2026: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ರಿಸಲ್ಟ್ ಹೀಗೆ ನೋಡಿ SSLC ಪರೀಕ್ಷೆ-1 ಫಲಿತಾಂಶ: ಯಾವ ಜಿಲ್ಲೆ ಫಸ್ಟ್? ಯಾವುದು ಲಾಸ್ಟ್? ಇಲ್ಲಿದೆ ಮಾಹಿತಿ