ಬೆಂಗಳೂರು, ಏಪ್ರಿಲ್ 23: ಕರ್ನಾಟಕ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರ ಫಲಿತಾಂಶ (SSLC Results 2026) ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಗುರುವಾರ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಜೊತೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ವೆಬ್‌ಸೈಟ್, ಡಿಜಿಲಾಕರ್ ಮತ್ತು SMS/WhatsApp ಮೂಲಕ ತಿಳಿಸಿದೆ. ವೆಬ್‌ಸೈಟ್ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ವೆಬ್‌ಪೋರ್ಟ್ https://karresults.nic.in ಮೂಲಕ ಫಲಿತಾಂಶವನ್ನು ವೀಕ್ಷಿಸಿ. ಹಾಗೇ, Karnatakaone ಎನ್ನುವ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ನೋಡಬಹುದು. ಇನ್ನು, ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಮಂಡಳಿಯ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರ ಎಸ್‌ಎಂಎಸ್ ಅಥವಾ ವಾಟ್ಸಪ್ ಮೂಲಕ ರವಾನೆಯಾಗುತ್ತದೆ. ಫಲಿತಾಂಶ ನೋಡುವ ವಿಧಾನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ವೆಬ್‌ಪೋರ್ಟ್ https://karresults.nic.in ಅಥವಾ https://kseab.karnataka.gov.in/ ಗೆ ಭೇಟಿ ನೀಡಿ. ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು SSLC Result 2026 ಮೇಲೆ ಕ್ಲಿಕ್ ಮಾಡಿ ನಿಮ್ಮ ವಿವರಗಳನ್ನು ನಮೂದಿಸಿ (ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ) Submit ಮೇಲೆ ಕ್ಲಿಕ್ ಮಾಡಿ ನಿಮ್ಮ ಫಲಿತಾಂಶ ವೀಕ್ಷಿಸಿ (ನಿಮ್ಮ ಅಂಕಪಟ್ಟಿ Marks Card ಸ್ಕ್ರೀನ್ ಮೇಲೆ ಕಾಣುತ್ತದೆ. ಅಂಕಪಟ್ಟಿ ಡೌನ್‌ಲೋಡ್ ಮಾಡಿ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್ ತೆಗೆದುಕೊಳ್ಳಿ ಡಿಜಿಲಾಕರ್‌ನಕಲ್ಲೂ ಲಭ್ಯ ದ್ವಿತೀಯ ಪಿಯುಸಿಯಂತೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ತಕ್ಷಣವೇ ಡಿಜಿಲಾಕರ್‌ನಲ್ಲಿ ಲಭ್ಯವಾಗುವಂತೆ ಮಾಡಿದೆ. ಹೀಗಾಗಿ, ಅಧಿಕೃತ ವೆಬ್‌ಸೈಟ್ ಮಾತ್ರವಲ್ಲದೆ ವಿದ್ಯಾರ್ಥಿಗಳು Digilocker ಮೂಲಕ ತಮ್ಮ ಅಂಕಪಟ್ಟಿಯನ್ನು ಪಡೆಯಬಹುದು. ಡಿಜಿಲಾಕರ್‌ನಕಲ್ಲಿ ಮಾರ್ಕ್ಸ್ ಕಾರ್ಡ್ ಪಡೆಯುದು ಹೇಗೆ? ಹಂತ 1: ಮೊದಲಿಗೆ ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್‌ನಿಂದ ‘DigiLocker’ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ. ಅಪ್ಲಿಕೇಶನ್ ಇಲ್ಲದಿದ್ದರೆ ನೇರವಾಗಿ digilocker.gov.in ವೆಬ್‌ಸೈಟ್‌ಗೂ ಭೇಟಿ ನೀಡಿ. ಹಂತ 2: ಅಪ್ಲಿಕೇಶನ್ ತೆರೆದ ನಂತರ ಮುಖಪುಟದಲ್ಲಿ ಕಾಣುವ ‘ಡಾಕ್ಯುಮೆಂಟ್ ವರ್ಗಗಳ’ (Document Categories) ಅಡಿಯಲ್ಲಿ ‘ಶಿಕ್ಷಣ ಮತ್ತು ಕಲಿಕೆ’ (Education and Learning) ಎಂಬ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಹಲವಾರು ಶಿಕ್ಷಣ ಮಂಡಳಿಗಳ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಮ್ಮ ರಾಜ್ಯದ ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ’ (KSEAB) ಅನ್ನು ಹುಡುಕಿ ಆಯ್ಕೆ ಮಾಡಿ. ಹಂತ 3: ನಂತರದ ಸ್ಕ್ರೀನ್‌ನಲ್ಲಿ ನಿಮಗೆ ‘Class X Marksheet’ ಅಥವಾ SSLC Marksheet’ ಎಂಬ ಆಯ್ಕೆ ಕಾಣಿಸುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ SSLC ನೋಂದಣಿ ಸಂಖ್ಯೆ (Roll Number/Registration Number) ಮತ್ತು ಪರೀಕ್ಷೆ ಬರೆದ ವರ್ಷವನ್ನು (2026) ನಮೂದಿಸಿ. ಆಧಾರ್ ಕಾರ್ಡ್‌ನಲ್ಲಿರುವಂತೆ ನಿಮ್ಮ ವಿವರಗಳನ್ನು ಗಮನಿಸಿ ನೋಡಿ ಸಬ್‌ಮಿಟ್ ಮಾಡಿ. ಇದನ್ನೂ ಓದಿ: CET ಪರೀಕ್ಷೆ ಬರೆಯುವ ಪಿಯುಸಿ ವಿದ್ಯಾರ್ಥಿಗಳಿಗೆ ಕೆಇಎನಿಂದ ಗುಡ್ ನ್ಯೂಸ್ ಹಂತ 4: ಬಳಿಕ ಕರ್ನಾಟಕ SSLC ಫಲಿತಾಂಶ ಪರದೆಯ ಮೇಲೆ ಮೂಡುತ್ತದೆ. ಇದರಲ್ಲಿ ನಿಮ್ಮ ವಿಷಯವಾರು ಅಂಕಗಳು ಲಭ್ಯವಿರುತ್ತವೆ. ಅಲ್ಲಿರುವ ಡೌನ್‌ಲೋಡ್ ಬಟನ್ ಕ್ಲಿಕ್ ಮಾಡುವ ಮೂಲಕ ಪಿಡಿಎಫ್ (PDF) ರೂಪದಲ್ಲಿ ನಿಮ್ಮ ಅಂಕಪಟ್ಟಿಯನ್ನು ಪಡೆದುಕೊಳ್ಳಬಹುದಾಗಿದೆ. ಮಾರ್ಚ್ 18 ರಿಂದ ನಡೆದಿದ್ದ ಪರೀಕ್ಷೆ: ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18 ರಿಂದ ಎ.2ರವರೆಗೆ ನಡೆದಿತ್ತು. 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation CET ಪರೀಕ್ಷೆ ಬರೆಯುವ ಪಿಯುಸಿ ವಿದ್ಯಾರ್ಥಿಗಳಿಗೆ ಕೆಇಎನಿಂದ ಗುಡ್ ನ್ಯೂಸ್ SSLC ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ, ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ