Student stand in sun 2 hours for 2 minutes late yelahanka school ncrಸಾಂದರ್ಭಿಕ ಚಿತ್ರ

ಬೆಂಗಳೂರು, ಮಾರ್ಚ್‌ 14: ಶಾಲೆಗೆ ಎರಡು ನಿಮಿಷ ತಡವಾಗಿ ಬಂದಿದ್ದಕ್ಕೆ ವಿದ್ಯಾರ್ಥಿಯನ್ನು ಎರಡು ಗಂಟೆ ಬಿಸಿಲಿನಲ್ಲಿ ನಿಲ್ಲಿಸಿದ ಘಟನೆ ಬೆಂಗಳೂರಿನ (Bangalore) ಯಲಹಂಕದಲ್ಲಿ (Yelahanka) ನಡೆದಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಯಲಹಂಕದ ಅತ್ತೂರು ಲೇಔಟ್ ಸಮೀಪದ ಖಾಸಗಿ ಶಾಲೆಯಲ್ಲಿ ಓದುತ್ತಿರುವ ಪ್ರಥಮ ತರಗತಿ ವಿದ್ಯಾರ್ಥಿಯು ಕೇವಲ ಎರಡು ನಿಮಿಷ ತಡವಾಗಿ ಶಾಲೆಗೆ ಬಂದ್ದಿದ್ದಾನೆ.

ಅದಕ್ಕೆ ಶಾಲೆಯ ಸಿಬ್ಬಂದಿ ವಿದ್ಯಾರ್ಥಿಯನ್ನು ಶಿಕ್ಷೆಯಾಗಿ ಸುಮಾರು ಎರಡು ಗಂಟೆಗಳ ಕಾಲ ಬಿಸಿಲಿನಲ್ಲಿ ನಿಲ್ಲಿಸಿರುವ ಆರೋಪ ಕೇಳಿಬಂದಿದೆ. ಮಕ್ಕಳಿಗೆ ನೀಡಿದ ಈ ಶಿಕ್ಷೆಯ ಕುರಿತು ಪೋಷಕರು ಶಾಲಾ ಆಡಳಿತವನ್ನು ಪ್ರಶ್ನಿಸಿದಾಗ, ಪ್ರಾಂಶುಪಾಲರು ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟರ್‌) ನಲ್ಲಿ ವೈರಲ್ ಆಗಿದ್ದು, ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಯಲಹಂಕ ನ್ಯೂ ಟೌನ್ ಪೊಲೀಸರು ನಾನ್-ಕಾಗ್ನೈಸಬಲ್ ರಿಪೋರ್ಟ್ (NCR) ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಪ್ರಕಾರ, ಮಕ್ಕಳಿಗೆ ದೈಹಿಕ ಅಥವಾ ಮಾನಸಿಕ ಹಿಂಸೆ ನೀಡುವುದು ಬಾಲಾಪರಾಧಿ ನ್ಯಾಯ (ಕೇರ್ ಅಂಡ್ ಪ್ರೊಟೆಕ್ಷನ್ ಆಫ್ ಚಿಲ್ಡ್ರನ್) ಕಾಯ್ದೆ, 2015ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ.

ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *