ಧಾರವಾಡ, ಮಾರ್ಚ್ 15: ಧಾರವಾಡ (Dharwad) ಜಿಲ್ಲೆಯ ಕ್ರೀಡಾಪಟುಗಳ ದಶಕಗಳ ಕನಸಾಗಿದ್ದ ಸುಸಜ್ಜಿತ ಕ್ರೀಡಾ ಸಂಕೀರ್ಣವನ್ನು ಕೇಂದ್ರ ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವೀಯ ಹಾಗೂ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ಇಂದು (ಮಾ.15) ಲೋಕಾರ್ಪಣೆಗೊಳಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಕೇಂದ್ರ ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವೀಯ, ಕೇಂದ್ರ ಸರ್ಕಾರವು ಕ್ರೀಡಾ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ಹೊಸ ಸಂಕೀರ್ಣವು ಗ್ರಾಮೀಣ ಪ್ರತಿಭೆಗಳನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಲು ಸಹಕಾರಿಯಾಗಲಿದೆ ಎಂದರು. ಕ್ರೀಡಾ ಸಂಕೀರ್ಣದ ಉದ್ಘಾಟನೆಯ ನಂತರ ಧಾರವಾಡ ಲೋಕಸಭಾ ಕ್ಷೇತ್ರದ ‘ಸಂಸದ ಕ್ರೀಡಾ ಮಹೋತ್ಸವ 2025-26’ ರ ಭಾಗವಾಗಿ ನಡೆದ ಕುಸ್ತಿ ಪಂದ್ಯಾವಳಿಯ ಅಂತಿಮ ಹಂತದ ಪಂದ್ಯವು ಯಶಸ್ವಿಯಾಗಿ ಸಂಪನ್ನಗೊಂಡಿತು. ಕೇಂದ್ರ ಸಚಿವರು ಪೈಲ್ವಾನರ ಅಪ್ರತಿಮ ಶೌರ್ಯ ಮತ್ತು ಮಣ್ಣಿನ ಮಕ್ಕಳ ಕ್ರೀಡಾ ಪಟ್ಟುಗಳನ್ನು ವೀಕ್ಷಿಸಿ, ವಿಜೇತರಾದ ಕ್ರೀಡಾಪಟುಗಳನ್ನು ಅಭಿನಂದಿಸಿದರು. ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಕ್ರೀಡೆಯು ಕೇವಲ ಶಕ್ತಿಯ ಪ್ರದರ್ಶನವಲ್ಲ, ಅದು ಶಿಸ್ತು ಮತ್ತು ಏಕಾಗ್ರತೆಯ ಸಂಕೇತವಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ‘ಖೇಲೋ ಇಂಡಿಯಾ’ ಸಂಕಲ್ಪದಂತೆ ಸ್ಥಳೀಯ ಕ್ರೀಡಾಪಟುಗಳಿಗೆ ವಿಶ್ವದರ್ಜೆಯ ಸೌಲಭ್ಯ ನೀಡುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು. ಕ್ರೀಡಾ ಸಂಕೀರ್ಣದ ವಿಶೇಷತೆ ಎನ್.ಎಂ.ಡಿ.ಸಿ ಮತ್ತು ಒ.ಎನ್.ಜಿ.ಸಿ. ಸಂಸ್ಥೆಗಳ ಸಿ.ಎಸ್.ಆರ್. ಅನುದಾನದಡಿ 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸಂಕೀರ್ಣವು, ದೆಹಲಿಯ ಐಐಟಿ ಹಾಗೂ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ನ ತಾಂತ್ರಿಕ ಮಾರ್ಗದರ್ಶನದಲ್ಲಿ ಅತ್ಯಂತ ವ್ಯವಸ್ಥಿತವಾಗಿ ವಿನ್ಯಾಸಗೊಂಡಿದೆ. ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಯುಗಾದಿ ಹಬ್ಬದ ನಿಮಿತ್ತ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು ಈ ಕೇಂದ್ರವು ಅಂತಾರಾಷ್ಟ್ರೀಯ ಗುಣಮಟ್ಟದ ಈಜುಕೊಳ, ಕಬಡ್ಡಿ ಅಂಕಣ, ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ಸುಸಜ್ಜಿತ ಜಿಮ್ ಮತ್ತು ವೈದ್ಯಕೀಯ ಸೌಲಭ್ಯಗಳಂತಹ ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒಳಗೊಂಡಿದ್ದು, ಸ್ಥಳೀಯ ಪ್ರತಿಭೆಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಪೂರಕವಾದ ವೇದಿಕೆಯನ್ನು ಕಲ್ಪಿಸಿಕೊಡಲಿದೆ. ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation ಪ್ರಯಾಣಿಕರ ಗಮನಕ್ಕೆ: ಯುಗಾದಿ ಹಬ್ಬದ ನಿಮಿತ್ತ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು, ಟ್ರೈನ್ ಸಮಯ ಇಲ್ಲಿದೆ ಕನ್ನಡದ ʼದಡ ಸೇರಿಸು ತಂದೆʼ ಸಣ್ಣಕತೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ