Yadgiri District Court Requirement 2026: Process server and peon only 10 passಸಾಂದರ್ಭಿಕ

ಸರ್ಕಾರಿ ಉದ್ಯೋಗಕ್ಕಾಗಿ (Government Job) ಕಾಯುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ದೊರೆತಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯ (Yadgiri District Court) ವತಿಯಿಂದ ಖಾಲಿ ಇರುವ ಪ್ರೊಸೆಸ್ ಸರ್ವರ್ ಮತ್ತು ಪಿಯೋನ್ ಸೇರಿ ಒಟ್ಟು 14 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Karnataka Judiciary ಅಧೀನದಲ್ಲಿ ನಡೆಯುತ್ತಿರುವ ಈ ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ.27,000 ರಿಂದ 61,300 ರೂ. ರವರೆಗೆ ವೇತನ ನೀಡಲಾಗುತ್ತದೆ.

ಅರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ

29 ಜನವರಿ 2026ರಂತೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷಗಳೊಳಗೆ ಇರಬೇಕು.

ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ:

  1. ಎಸ್‌ಸಿ / ಎಸ್‌ಟಿ ಹಾಗೂ ಪ್ರವರ್ಗ–1 ಅಭ್ಯರ್ಥಿಗಳಿಗೆ – 5 ವರ್ಷ
  2. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 3 ವರ್ಷ
  3. ಅಂಗವಿಕಲರು ಅಥವಾ ವಿಧವೆಯರಿಗೆ – 10 ವರ್ಷ

ಅರ್ಜಿ ಸಲ್ಲಿಸುವ ಕೊನೆ ದಿನಾಂಕ: ಏಪ್ರಿಲ್ 12ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: IDBI ಬ್ಯಾಂಕ್‌ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಅರ್ಜಿ ಲಿಂಕ್‌ ಇಲ್ಲಿದೆ

ಅರ್ಜಿ ಶುಲ್ಕ:

  1. ಸಾಮಾನ್ಯ ವರ್ಗ – 200 ರೂ.
  2. ಎಸ್‌ಸಿ / ಎಸ್‌ಟಿ / Cat-1 / ಅಂಗವಿಕಲ ಅಭ್ಯರ್ಥಿಗಳು – 100 ರೂ. ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳ ಆಯ್ಕೆ ಸಂದರ್ಶನದ ಮೂಲಕ ನಡೆಯಲಿದೆ. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಮತ್ತು ಶೈಕ್ಷಣಿಕ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಅಗತ್ಯ.

ಆನ್‌ಲೈನ್ ಅರ್ಜಿ ಸಲ್ಲಿಸಲು ಅಧಿಕೃತ ಇ-ಕೋರ್ಟ್ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ದಾಖಲೆಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬಹುದು.

ಯಾದಗಿರಿಯಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಕೊನೆಯ ದಿನಾಂಕದವರೆಗೆ ಕಾಯದೆ ಬೇಗ ಅರ್ಜಿ ಸಲ್ಲಿಸುವುದು ಉತ್ತಮ.

ಅಧಿಕೃತ ಅಧಿಸೂಚನೆ ಓದಲು ಇಲ್ಲಿ ಲಿಂಕ್​ ಕ್ಲಿಕ್‌ ಮಾಡಿ

ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *